Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ:ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ಅನೇಕರ ಜೀವನದಲ್ಲಿ ಬೆಳಕು ಚೆಲ್ಲುವಲ್ಲಿ ಈ ಯೋಜನೆಗಳು ಸಹಕಾರಿಯಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ೭೮ನೇ ಸ್ವತಂತ್ರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ದೇಶ ಸ್ವತಂತ್ರ ಬಂದ ನಂತರ ಭಾರತವನ್ನು ಅತ್ಯಂತ ಪ್ರಗತಿಯತ್ತ ಕೊಂಡ್ಯೊಯಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕವಾಗಿ ಜಗತ್ತಿನಲ್ಲಿಯೇ ಮುನ್ನಡೆಯ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ನಮ್ಮ ಹಿರಿಯ ನಾಯಕರ ಪ್ರಯತ್ನದ ಫಲವಾಗಿ ಇಂದು ೭೮ನೆಯ ಸ್ವಾತಂತ್ರೋತ್ಸವವನ್ನು ಬಹಳ ಅಭಿಮಾನದಿಂದ ಆಚರಣೆ ಮಾಡುತ್ತಿದ್ದೇವೆ. ಜಾತಿ, ಧರ್ಮ, ಮತಗಳಿಗಿಂತ ದೇಶ ಪ್ರೇಮ ದೊಡ್ಡದು. ಸಂವಿಧಾನದಿಂದ ಭಾರತ ಬದಲಾಗಿದೆ. ಭಾರತವು ಇಂದು ಸಧೃಡವಾಗಿ, ಆರ್ಥಿಕವಾಗಿ ಸಬಲವಾಗಿದೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್‌ರವರು ಬರೆದಿರುವ ಸಂವಿಧಾನ. ಇಂದು ನಾವೆಲ್ಲರೂ ದೇಶಕ್ಕಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಿಕೊಳ್ಳಬೇಕು. ಈ ಭಾಗದ ಶಾಸಕನಾಗಿ ಆಯ್ಕೆಯಾದ ಬಳಿಕ ಸಿಂದಗಿ ಮತಕ್ಷೇತ್ರವನ್ನು ಅಭಿವೃದ್ಧಿ ಪಡಿಸಬೇಕು ಎನ್ನುವ ದಿಸೆಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶಿಕ್ಷಣ, ಆರೋಗ್ಯದಂತಹ ಅನೇಕ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ, ನಿವೃತ್ತ ಯೋಧರಿಗೆ, ಪ್ರಗತಿಪರ ರೈತರಿಗೆ, ಪೋಲಿಸ ಸಿಬ್ಬಂದಿಗಳಿಗೆ, ಶಿಕ್ಷಕರಿಗೆ, ಛದ್ಮವೇಷ ಧರಿಸಿದ ವಿವಿಧ ಶಾಲೆಯ ಮಕ್ಕಳಿಗೆ, ಕವಾಯತ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನ ಮಾಡಲಾಯಿತು. ಈ ವೇಳೆ ಕಂಪನ್ ದ್ರಾವಿಡ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ರವಿ ಗೋಲಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ವಿವಿಧ ಶಾಲೆಯ ಮಕ್ಕಳು ಛದ್ಮವೇಷ ಧರಿಸಿದ್ದರು. ಪಟ್ಟಣದ ಪ್ರೇರಣಾ ಶಾಲೆ, ಸರಕಾರಿ ಎಂಪಿಎಸ್ ಶಾಲೆ, ಸರಕಾರಿ ಆದರ್ಶ ವಿದ್ಯಾಲಯ,ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲೆ, ಜ್ಞಾನ ಭಾರತಿ ಶಾಲೆಯ ಮಕ್ಕಳು, ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕವಾಯತ್ ನಡೆಯಿತು.
ಈ ವೇಳೆ ತಾಪಂ ಇಓ ರಾಮು ಅಗ್ನಿ, ಸಿಪಿಐ ನಾನಾಗೌಡ ಪೊಲೀಸ್‌ಪಾಟೀಲ, ಪಿಎಸ್‌ಐ ಆರೀಫ್ ಮುಷಾಪುರಿ, ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಆರಿಫ್ ಬಿರಾದಾರ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಅಬಕಾರಿ ಸಿಪಿಐ ಆರತಿ ಖೈನೂರ, ಸುರೇಶ ಕೊಂಡಿ, ಭಗವಂತ ಮುಳಸಾವಳಗಿ, ಪುರಸಭೆ ಸದಸ್ಯ ಸಂದೀಪ ಚೌರ, ಸಿದ್ದು ಮಲ್ಲೇದ, ಶಾಂತೂ ರಾಣಾಗೋಳ, ಸಂತೋಷ ಮನಗೂಳಿ, ಸುನಂದಾ ಯಂಪೂರೆ, ಮಹಾನಂದ ಬಮ್ಮಣ್ಣಿ, ಪ್ರತಿಭಾ ಚಳ್ಳಗಿ, ಅಂಬಿಕಾ ಪಾಟೀಲ, ಜಯಶ್ರೀ ಹದನೂರ, ದೈ.ಶಿಕ್ಷಕ ಆರ್.ಆರ್.ನಿಂಬಾಳಕರ, ಕೃಷಿ ಅಧಿಕಾರಿ ಎಚ್.ವೈ.ಸಿಂಗೆಗೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಇದ್ದರು. ದೈಹಿಕ ನಿರ್ದೇಶಕ ರವಿ ಗೋಲಾ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.