Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಗೂಳಿ ಅಗಸಿ ಬಳಿ ದಲಿತರಿಗಾಗಿ ಮನೆಗಳನ್ನು ಕಟ್ಟುವುದು ಶತಸಿದ್ಧ!
(ರಾಜ್ಯ ) ಜಿಲ್ಲೆ

ಮನಗೂಳಿ ಅಗಸಿ ಬಳಿ ದಲಿತರಿಗಾಗಿ ಮನೆಗಳನ್ನು ಕಟ್ಟುವುದು ಶತಸಿದ್ಧ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನೇತಾಜಿ ಪುತ್ಥಳಿ ಅನಾವರಣಗೊಳಿಸಿದ ಶಾಸಕ ಯತ್ನಾಳ ಭರವಸೆ

ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ದಲಿತ ಸಮುದಾಯವರು ನೂರಾರು ವರ್ಷಗಳಿಂದ ವಾಸಿಸುತ್ತಿರುವ ಮನೆಗಳ ಹತ್ತಿರದ ಕಂದಾಯ ಇಲಾಖೆಯ ಏಳು ಎಕರೆ ಆಸ್ತಿಯನ್ನು ವಕ್ಫ್ ಆಸ್ತಿಯಾಗಿ ಮಾಡಿಕೊಂಡಿರುವುದನ್ನು, ಕರ್ನಾಟಕ ಸ್ಲಂ ಬೋರ್ಡ ಅಂತ ಉತಾರೆ ಮಾಡಿಕೊಡಿ, ಅಲ್ಲಿ ದಲಿತರಿಗಾಗಿ ೨೦೦ ಆಶ್ರಯ ಮನೆಗಳನ್ನು ನಿರ್ಮಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದ ವಾರ್ಡ ನಂ.೩೫ ರಲ್ಲಿ ಬರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ನೇತಾಜಿ ಪುತ್ಥಳಿ ಅನಾವರಣಗೊಳಿಸುವ ಮೂಲಕ ವೃತ್ತ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜಗತ್ತಿನ ಯಾವ ಶಕ್ತಿ ಅಡ್ಡ ಬಂದರೂ ಮನಗೂಳಿ ಅಗಸಿ, ಬಳಿ ದಲಿತರಿಗಾಗಿ ಮನೆಗಳನ್ನು ಕಟ್ಟುವೆ. ಅದಕ್ಕೆ ಡಾ.ಅಂಬೇಡ್ಕರ್ ನಗರ ಅಂತ ಹೆಸರನ್ನೇ ಇಡುವೆ ಎಂದು ಭರವಸೆ ನೀಡಿದರು.
ಭಾರತೀಯ ಸೇನೆ, ರೈಲ್ವೆ ಬಿಟ್ಟರೇ ಅತೀ ಹೆಚ್ಚು ಆಸ್ತಿ ಇರುವುದು ವಕ್ಫ್ದು. ಒಂದು ಪಾಕಿಸ್ತಾನಕ್ಕಿಂತಲೂ ಹೆಚ್ಚು ವಿಸ್ತಿರ್ಣ ಎನ್ನುವುದು ಯೋಚಿಸಬೇಕಾದ ವಿಚಾರ. ಮನಸ್ಸಿಗೆ ಬಂದಂತೆ ಸರ್ಕಾರದ ಆಸ್ತಿಯನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿಕೊಂಡಿರುವುದು ತಡೆಯಲೆಂದೆ, ವಕ್ಫ್ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್ ಆಸ್ತಿ ಮುಕ್ತಗೊಳಿಸಿ, ಕಂದಾಯ ಇಲಾಖೆಗೆ ನೀಡಬೇಕು. ಅದರಲ್ಲಿಯ ಅರ್ಧ ಆಸ್ತಿ ದಲಿತರಿಗೆ ಮನೆ ಕಟ್ಟಿಸಿಕೊಳ್ಳಲು ನೀಡುವಂತೆ ಪ್ರಧಾನಿಗಳಿಗೆ ಪತ್ರ ಬರೆಯುವೆ ಎಂದು ಹೇಳಿದರು.
ಕೇವಲ ಚರಕಾ ಸುತ್ತುವುದರಿಂದ ದೇಶಕ್ಕೆ ಸ್ವಾತಂತ್ರ್ಯ ಸಿಗಲಿಲ್ಲ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಯಕ್ಕೆ ಸ್ವಾತಂತ್ರ್ಯ ಸಿಕ್ಕಿತು, ಶ್ರೀಮಂತನಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಇಂದಿನ ಐಎಎಸ್ ಗೆ ಸಮವಾದ ಐಸಿಎಸ್ ತ್ಯಜಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಬಲಿಷ್ಠ ಸೈನ್ಯ ಹುಟ್ಟು ಹಾಕಿ ಶ್ರಮಿಸಿದ ಮಹಾನ್ ನಾಯಕ. ಈಗ ನನ್ನನ್ನು ಹೇಗೆ ತುಳಿಯಲು ಯತ್ನಿಸುತ್ತಿದ್ದಾರೋ, ಹಾಗೆಯೇ ನಿರಂತರವಾಗಿ ಅವರನ್ನು ತುಳಿಯುತ್ತಲೇ ಬಂದರು. ಇಲ್ಲಿಯವರೆಗೂ ಅವರ ಸಾವಿನ ನಿಖರತೆ ಸಹ ತಿಳಿದಿಲ್ಲ ಎಂದರು.
೨೦೧೮ರಲ್ಲಿ ನಿಮ್ಮ ಆಶೀರ್ವಾದಿಂದ ಶಾಸಕನಾದೆ. ನಮ್ಮದೇ ಸರ್ಕಾರವಿದ್ದರೂ ಜಗಳಾಡಿ ಮಂತ್ರಿ ಆಗಲಿಲ್ಲ. ಆದರೆ, ನಿರೀಕ್ಷೆ ಮೀರಿ ಅನುದಾನ ತಂದು, ವಿಜಯಪುರ ಮಾದರಿ ನಗರವನ್ನಾಗಿ ಅಭಿವೃದ್ಧಿ ಮಾಡಲು ಸಾಧ್ಯವಾಯಿತು. ನಗರದಲ್ಲಿ ನೇತಾಜಿ ಸೇರಿದಂತೆ ದೇಶಕ್ಕಾಗಿ ಶ್ರಮಿಸಿದ ಅನೇಕ ಮಹಾನ್ ನಾಯಕರ ವೃತ್ತ ನಿರ್ಮಿಸಿ, ಪುತ್ಥಳಿ ಪ್ರತಿಷ್ಠಾಪನೆ, ಮಾರ್ಗಗಳಿಗೆ ಮಹಾಪುರುಷರ ಹೆಸರು ನಾಮಕರಣಗೊಳಿಸಲಾಗಿದೆ. ಅವರ ಶ್ರಮ, ತತ್ವ ಸಿದ್ಧಾಂತಗಳು, ಸಾಧನೆ ಇಂದಿನ ಯುವ ಪೀಳಿಗೆ ತಿಳಿಸುವ ಉದ್ದೇಶವಾಗಿ ಎಂದು ಹೇಳಿದರು.
ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ ಪ್ರಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ವೃತ್ತ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಕಾಳಿದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಶೋಕ ಜಿದ್ದಿ ಸೇರಿದಂತೆ ಮಾಜಿ ಸೈನಿಕರು ಮತ್ತಿತರನ್ನು ಸನ್ಮಾನಿಸಲಾಯಿತು.
ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಶಿವರುದ್ರ ಬಾಗಲಕೋಟ, ಕಿರಣ ಪಾಟೀಲ, ಮಹೇಶ ಒಡೆಯರ, ಮುಖಂಡರಾದ ರಾಜೇಶ ದೇವಗಿರಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ನೇತಾಜಿ ಸುಭಾಷ್ ಚಂದ್ರ ಬೋಸ್ ಸಾಮಾಜಿಕ ಸೇವಾ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ಆನಂದ ಹಂಜಿ, ಪ್ರವಚನಕಾರ ಬಾಬುರಾವ್ ಮಹಾರಾಜ್ ಇದ್ದರು.
ರೇವಣಸಿದ್ದ ಮುಳಸಾವಳಗಿ ಸ್ವಾಗತಿಸಿದರು. ಮರನೂರ ನಿರೂಪಿಸಿದರು.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎನ್ನುವ ಅಪಪ್ರಚಾರ ನಿರಂತರವಾಗಿ ನಡೆದಿದೆ. ಸೂರ್ಯ ಚಂದ್ರರು ಇರುವವರೆಗೂ ಅದು ಸಾಧ್ಯವಿಲ್ಲ. ಅಬೇಡ್ಕರ್ ಅವರ ನಿಜವಾದ ಸೇವೆ ಮಾಡಿದವರು ಮೋದಿಯವರು.”

– ಬಸನಗೌಡ ಪಾಟೀಲ ಯತ್ನಾಳ, ಶಾಸಕರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.