ಸಿಂದಗಿ: ಪಟ್ಟಣದ ಬಸವ ನಗರದ ಜ್ಞಾನ ಭಾರತಿ ವಿದ್ಯಾಮಂದಿರ ಶಾಲೆಯಲ್ಲಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಾ) ಅವರು ಗುರುವಾರ 78ನೇಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಲಕ್ಷಾಂತರ ಚಳುವಳಿಕಾರರ ತ್ಯಾಗ ಬಲಿದಾನಗಳಿಂದಾಗಿ ಬ್ರಿಟಿಷರ ದಾಸ್ಯದಿಂದ ಭಾರತ ಮುಕ್ತಗೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಹಾನ್ ಚೇತನಗಳನ್ನು ಸ್ಮರಿಸಿ, ಭವ್ಯ ಮತ್ತು ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಯುವಜನತೆಗೆ ಕರೆ ನೀಡಿದರು.
ಶಾಲೆಯ ಗುರು ವೃಂದ, ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

