ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಇದೇ ಪ್ರಥಮ ಬಾರಿಗೆ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕೃಷಿ ಮೇಳದ ಜಾಗೆಯನ್ನು ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಜಾತ್ರೆಯಂಗವಾಗಿ ಹಮ್ಮಿಕೊಂಡಿರುವ ಕೃಷಿ ಮೇಳಕ್ಕೆ ನಮ್ಮ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವದು. ಮೇಳದಲ್ಲಿ ನಮ್ಮ ಇಲಾಖೆಯಿಂದ ಒಂದು ಮಳಿಗೆಯನ್ನು ಹಾಕುವ ಮೂಲಕ ರೈತ ಬಾಂಧವರಿಗೆ ಅಗತ್ಯ ಮಾಹಿತಿಯನ್ನು ಒದಗಿಸಲಾಗುವದು. ಈ ಮೇಳದಲ್ಲಿ ಕೃಷಿ ಸಂಬಂಧಿತ ಉಪಕರಣಗಳ ಮಳಿಗೆಗಳು, ಬೀಜ-ಗೊಬ್ಬರ ಮಳಿಗೆಗಳು ಇರಲಿವೆ. ರೈತ ಬಾಂಧವರು ಈ ಕೃಷಿ ಮೇಳದ ಸದುಪಯೋಗ ಪಡೆಸಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಮುಖಂಡರಾದ ಶೇಖರ ಗೊಳಸಂಗಿ, ಶಂಕರಗೌಡ ಬಿರಾದಾರ, ಎಂ.ಜಿ.ಆದಿಗೊಂಡ, ಅಶೋಕ ಕಲ್ಲೂರ, ಶ್ರೀಕಾಂತ ಪಟ್ಟಣಶೆಟ್ಟಿ, ಸಂಜೀವ ಬಿರಾದಾರ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

