ವಿಜಯಪುರ: ೨೦೨೪-೨೫ನೇ ಸಾಲಿಗಾಗಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸಿನ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿಲಾಗಿದೆ. ದಿನಾಂಕ: ೧೩-೦೮-೨೦೨೪ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ https://shp.karnataka.gov.inದಿನಾಂಕ: ೧೨-೦೯-೨೦೨೪ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಮೌಲಾನಾ ಆಝಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೯೫೫೨೩, ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
