ವಿಜಯಪುರ: ಝಳಕಿ ೧೧೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ ೩೩ಕೆವ್ಹಿ ಬಸ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಂಡಿರುವುದರಿಂದ ದಿನಾಂಕ : ೧೮-೦೮-೨೦೨೪ ರಂದು ಮಧ್ಯಾಹ್ನ ೧೨ ರಿಂದ ಸಂಜೆ ೬ ಗಂಟೆಯವರೆಗೆ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಝಳಕಿ ೧೧೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ೩೩ ಕೆವ್ಹಿ ಹೊರ್ತಿ, ನಿವರಗಿ, ಧೂಳಖೇಡ, ಹಲಸಂಗಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
