ವಿಜಯಪುರ: ಮೀನುಗಾರಿಕೆ ಇಲಾಖೆಯ ವತಿಯಿಂದ ೨೦೨೪-೨೫ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಲಾಶಯ, ನದಿಭಾಗ, ಕೆರೆಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಖರೀದಿಗೆ ಸಹಾಯ ಧನ ಹಾಗೂ ಭಾವಿ- ಹೊಂಡಗಳಿಗೆ ಮೀನುಮರಿ ಸರಬರಾಜು, ಮೀನು ಸಲಕರಣೆ ಕಿಟ್ ವಿತರಣೆ, ಮೀನು ಕೃಷಿಕೊಳ ನಿರ್ಮಾಣಕ್ಕೆ ಮತ್ತು ಹೂಡಿಕೆ ವೆಚ್ಚಗಳಿಗೆ ಸಹಾಯ ಧನ,ದ್ವಿಚಕ್ರ ವಾಹನ, ತ್ರಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ಮತ್ತು ಶಾಖ ನಿರೋಧಕ ಪೆಟ್ಟಿಗೆ ಖರೀದಿಗೆ ಸಹಾಯ ಧನ ಯೋಜನೆಗಳಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ವೃತ್ತಿಪರ ಮೀನುಗಾರರು, ಮೀನು ಕೃಷಿಕರು ಹಾಗೂ ಮೀನುಗಾರರ ಸಹಕಾರ ಸಂಘದ ಸದಸ್ಯರು ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೦ ಕೊನೆಯ ದಿನವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು (ಮೊ:೯೯೮೬೧೩೨೭೧೭), ವಿಜಯಪುರ,ಬಬಲೇಶ್ವರ, ತಿಕೋಟಾ,ದೇವರ ಹಿಪ್ಪರಗಿ, ಸಿಂದಗಿ, ಆಲಮೇಲ, ಇಂಡಿ ಹಾಗೂ ಚಡಚಣ ತಾಲ್ಲೂಕಿನ ಮೀನು ಕೃಷಿಕರು, ಮೀನುಗಾರರು, ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ ಮೊ: ೯೮೪೫೯೨೭೧೧೦ ಹಾಗೂ ಮುದ್ದೇಬಿಹಾಳ, ತಾಳಿಕೋಟಿ, ನಿಡಗುಂದಿ, ಕೊಲ್ಲಾರ, ಬಸವನ ಬಾಗೇವಾಡಿ ತಾಲ್ಲೂಕಿನ ಮೀನು ಕೃಷಿಕರು ಹಾಗೂ ಮೀನುಗಾರರು, ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ (ಮೊ: ೯೮೮೦೨೧೦೫೦೫) ಇವರ ಕಛೇರಿಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
