ತಾಳಿಕೋಟಿ: ಪಟ್ಟಣದ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡ ನದೀಂ ಕಡು ಅವರು ತಮ್ಮ ರಾಜಕೀಯ ಮಾರ್ಗದರ್ಶಕಿಯಾದ ಮಂಗಳಾದೇವಿ ಬಿರಾದಾರ ಅವರೊಂದಿಗೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಶಾಸಕ ನಡಹಳ್ಳಿ ಅವರ ಜನಪರ ಕಾಳಜಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವವನ್ನು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಾಧನೆಗಳನ್ನು ಮೆಚ್ಚಿ ಅವರು ಜೆಡಿಎಸ್ ಧುರೀಣೆಯಾಗಿದ್ದ ಮಂಗಳಾದೇವಿ ಬಿರಾದಾರ ಹಾಗೂ ಅಪಾರ ಬೆಂಬಲಿಗರೊ0ದಿಗೆ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ಸಮಯದಲ್ಲಿ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ), ಶಾಂತಗೌಡ ಬಿರಾದಾರ, ಪುರಸಭೆ ಸದಸ್ಯೆ ಸಂಗಮ್ಮ ದೇವರಹಳ್ಳಿ, ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Related Posts
Add A Comment