– ಚೇತನ ಶಿವಶಿಂಪಿ
ಮುದ್ದೇಬಿಹಾಳ: ವಿದ್ಯಾರ್ಥಿಗಳಿಬ್ಬರಿಗೆ ೭೮ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನೆರವೇರಿಸುವ ಸೌಭಾಗ್ಯ ಲಭಿಸಿದೆ.
ಪಟ್ಟಣದ ಹುಡ್ಕೋ ಬಡಾವಣೆಯ ಶಿರವಾಳ ಲೇಔಟ್ ನಲ್ಲಿರುವ ವೀರಭದ್ರೇಶ್ವರ ಶೈಕ್ಷಣಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಧ್ವಜಾರೋಹಣ ನೆರವೇರಿಸುವ ಸೌಭಾಗ್ಯ ಕಲ್ಪಿಸಿಕೊಡಲಾಗಿದೆ.
ವಿಧ್ಯಾರ್ಥಿಗಳಾದ ಅಕುಲ ನಾಟೆಕಾರ ಮತ್ತು ಶರತ ಹಡಪದ ಧ್ವಜಾರೋಹಣ ನೆರವೇರಿಸಿದ ಭಾಗ್ಯಶಾಲಿ ವಿದ್ಯಾರ್ಥಿಗಳು.
ಕಳೆದ ಮೂರು ವರ್ಷಗಳಿಂದ ವಲಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದ ಕಾರಣ ಈ ಅವಕಾಶ ಕಲ್ಪಿಸಿರುವದಾಗಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎನ್.ಎಸ್.ಹಿರೇಮಠ ತಿಳಿಸಿದ್ದಾರೆ.
ಅದೆಷ್ಟೋ ದೇಶಪ್ರೇಮಿಗಳು ತಮ್ಮ ಜೀವಿತಕಾಲದಲ್ಲಿ ಒಮ್ಮೆಯಾದರೂ ಧ್ವಜಾರೋಹಣವನ್ನು ನೆರವೇರಿಸಬೇಕು ಎಂದುಕೊಂಡಿದ್ದರೂ ಲಭಿಸದ ಭಾಗ್ಯ ವಿದ್ಯಾರ್ಥಿಗಳಿಗೆ ಲಭಿಸಿದ್ದು ಹೆಮ್ಮೆಯ ವಿಷಯ.
Subscribe to Updates
Get the latest creative news from FooBar about art, design and business.
Related Posts
Add A Comment

