ಸಿಂದಗಿ: ರಾಜ್ಯದಲ್ಲಿ ಈಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಇಲ್ಲಿನ ಅಭ್ಯರ್ಥಿ. ಇಲ್ಲಿ ವ್ಯಕ್ತಿಗಿಂತ ಪಕ್ಷ ದೊಡ್ಡದು. ಎಂದು ಸಿಂದಗಿ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ವಿಠ್ಠಲ ಕೋಳೂರ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಏ.19 ರಂದು ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಗಾಂಧಿ ವೃತ್ತದಿಂದ ಮೆರವಣಿಗೆ ಬೃಹತ್ ಮಟ್ಟದಲ್ಲಿ ಪ್ರಾರಂಭಗೊAಡು ಅಂಬೇಡ್ಕರ ವೃತ್ತ, ಟಿಪ್ಪು ಸುಲ್ತಾನ, ಸ್ವಾಮಿ ವಿವೇಕಾನಂದ ವೃತ್ತ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ತಲುಪಿ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.
ಚುನಾವಣಾ ಅಭ್ಯರ್ಥಿ ಅಶೋಕ್ ಮನಗೂಳಿ ಮಾತನಾಡಿ, ಸಿಂದಗಿ ಮತಕ್ಷೇತ್ರದಿಂದ ೧೦ ಜನರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪಕ್ಷ ನನಗೆ ಟಿಕೆಟ್ ನೀಡಿದೆ. ಎಲ್ಲರೂ ಪಕ್ಷಕ್ಕಾಗಿ ಒಗ್ಗಟ್ಟಾಗಿ ದುಡಿದು ಗೆಲುವನ್ನು ನಮ್ಮದಾಗಿಸಿಕೊಳ್ಳುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Subscribe to Updates
Get the latest creative news from FooBar about art, design and business.
ಏ.19 ರಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ಸಲ್ಲಿಕೆ
Related Posts
Add A Comment