ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ದಿನಾಂಕ : ೧೦-೧೦-೨೦೨೪ ರಿಂದ ೧೪-೧೦-೨೦೨೪ರ ವರೆಗೆ ಪ್ರತಿ ವರ್ಷದಂತೆ ನಾಗಪೂರದ ದೀಕ್ಷಾ ಭೂಮಿಗೆ ಭೇಟಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https:swdservices.karnataka.gov.inಮೂಲಕ ದಿನಾಂಕ : ೩೧-೦೮-೨೦೨೪ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
