ವಿಜಯಪುರ: ಜಿಲ್ಲಾಡಳಿತದ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಆ.೨೦ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ದಿ: ಡಿ.ದೇವರಾಜ್ ಅರಸುರವರ ೧೦೯ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಿ.ದೇವರಾಜ್ ಅರಸು ಅವರ ಭಾವಚಿತ್ರ ಮೆರವಣಿಗೆ ಚಾಲನೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
