Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರ :ಸಿಎಂ
(ರಾಜ್ಯ ) ಜಿಲ್ಲೆ

ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರ :ಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ | ಸರ್ಕಾರ ಅಭದ್ರಗೊಳಿಸುವ ಷಡ್ಯಂತ್ರ | ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, “ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರ; ಕಾನೂನು ಹೋರಾಟ ಮಾಡಲಾಗುವುದು” ಎಂದು ಹೇಳಿದ್ದಾರೆ.
ಶನಿವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ. ನಮ್ಮ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
“ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು.
ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಅವರು ತಿರುಗೇಟು ನೀಡಿದ್ದಾರೆ.

ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಮೂಡಾ ವಿವಾದದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ ನಂತರ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಭ್ರಷ್ಟಾಚಾರದ ಕಳಂಕ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹವಾಗಿದ್ದು, ಸಿದ್ದರಾಮಯ್ಯನವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷವಾತದ ನ್ಯಾಯಾಂಗ ಪ್ರಕ್ರಿಯೆಗೆ ಸಹಕರಿಸಬೇಕು” ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.
ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ
    In (ರಾಜ್ಯ ) ಜಿಲ್ಲೆ
  • ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು
    In (ರಾಜ್ಯ ) ಜಿಲ್ಲೆ
  • ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
    In ಇತರೆ
  • ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿ ಕಾಮಗಾರಿಗೆ ೪೭.೫೦ ಕೋಟಿ ರೂ. ಮಂಜೂರು
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ
    In (ರಾಜ್ಯ ) ಜಿಲ್ಲೆ
  • ಬಣಜಿಗ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.