ಇಂಡಿ: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಅನುಮತಿ ನೀಡಿದ್ದಾರೆಂದು ರಾಜ್ಯಪಾಲರ ಈ ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು ಆಗಿದೆ ಎಂದು ಇಂದು ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೋಮಿನ್ ತಿಳಿಸಿದ್ದಾರೆ.
ಪ್ರತಿಭಟನೆ ಬೆಳಗ್ಗೆ ೧೧ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭಗೊಳ್ಳುತ್ತದೆ.
ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲರ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಇಂಡಿ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಇಂಡಿ ಪುರಸಭೆ ಸದಸ್ಯರು,ಮಾಜಿ ಜಿ.ಪಂ, ತಾ.ಪಂ ಸದಸ್ಯರು, ಗ್ರಾ.ಪಂ ಸದಸ್ಯರು,ವಿವಿಧ ಅಂಗ ಘಟಕಗಳ ಪದಾಧಿಕಾರಿಗಳು, ಹಿರಿಯ ಮುಖಂಡರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಜಾವೇದ ಮೋಮಿನ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

