ಅಫಜಲಪುರ: ದೇಶದಲ್ಲಿ ಒಂದಿಲ್ಲೊಂದು ಸ್ಥಳದಲ್ಲಿ ಮಹಿಳಾ ಶೋಷಣೆಗಳು ನಡೆಯುತ್ತಲೇ ಇವೆ. ಅದರಲ್ಲೂ ಅತ್ಯಾಚಾರ, ಕೊಲೆ ಪ್ರಕರಣಗಳು ನಿತ್ಯ ನಡೆಯುತ್ತಿದ್ದು ಆತಂಕ ಹುಟ್ಟಿಸಿದೆ. ಹೀಗಾಗಿ ಅತ್ಯಾಚಾರಿಗಳಿಗೆ ಗಲ್ಲಿಗೇರಿಸುವ ಕಠಿಣ ಕಾನೂನು ಜಾರಿಗೆ ತರಬೇಕೆಂದು ಬಡದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರತ್ನಶೀಲ ಒತ್ತಾಯಿಸಿದರು.
ಅವರು ತಾಲೂಕಿನ ಬಡದಾಳ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಕೊಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಪೈಶಾಚಿಕ ಕೃತ್ಯ ಖಂಡಿಸಿ ಒಪಿಡಿ ಬಂದ್ ಮಾಡಿ ಕೈಗಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿ ಮಾತನಾಡುತ್ತಾ ದೇಶದ ಮೂಲೆ ಮೂಲೆಗಳಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಿವೆ. ಅದರಲ್ಲೂ ಅತ್ಯಾಚಾರ ಮತ್ತು ಕೊಲೆಗಳಾದಾಗ ಅತ್ಯಾಚಾರಿಗಳು ಮತ್ತು ಕೊಲೆಪಾತಕರಿಗೆ ತ್ವರಿತವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸುವ ಕೆಲಸ ನಡೆಯುತ್ತಿಲ್ಲ ಎನ್ನುವುದು ನೋವಿನ ಸಂಗತಿಯಾಗಿದೆ. ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಮೇಲೆರಗಿದ ರಕ್ಕಸರನ್ನು ಸರ್ಕಾರ ಕ್ಷಮಿಸಬಾರದು. ಕಾನೂನು ವ್ಯವಸ್ಥೆಯಡಿ ಗಲ್ಲು ಶಿಕ್ಷೆಗೆ ಗುರಿಪಡಿಸಿ ಮಹಿಳೆಯರು ನಿರ್ಭೀತಿಯಿಂದ ಇರುವಂತೆ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಇದ್ದರು.
Subscribe to Updates
Get the latest creative news from FooBar about art, design and business.
ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಕಠಿಣ ಕಾನೂನು ಜಾರಿಗೆ ತನ್ನಿ: ಡಾ. ರತ್ನಶೀಲ
Related Posts
Add A Comment

