ಅಫಜಲಪುರ: ಸರ್ಕಾರವನ್ನು ಅಸ್ಥಿರಗೊಳಿಸುವುದಕ್ಕಾಗಿ ಬಿಜೆಪಿ, ಜೆಡಿಎಸ್ ಪಕ್ಷದವರು ಸದಾ ಹೊಂಚು ಹಾಕುತ್ತಲೇ ಇದ್ದಾರೆ, ಈಗ ವಿರೋಧ ಪಕ್ಷದವರಿಗೆ ರಾಜ್ಯಪಾಲರು ಕೈ ಜೋಡಿಸಿದಂತೆ ಕಾಣುತ್ತಿದ್ದು ರಾಜ್ಯಪಾಲರು ಬಿಜೆಪಿಗರ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ ಕೊರಬು ಆರೋಪಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ದ ತನಿಖೆಗೆ ಪ್ರಾಸಿಕ್ಯೂಷನ್‌ಗಾಗಿ ಅನುಮತಿ ನೀಡಿದ್ದು ಕಾನೂನು ಬಾಹಿರವಾದ ಕ್ರಮವಾಗಿದೆ ಎಂದ ಅವರು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮೇಲೆ ಸ್ವತಃ ಲೋಕಾಯುಕ್ತ ಸಂಸ್ಥೆಯೇ ಪ್ರಾಸಿಕ್ಯೂಷನ್‌ಗಾಗಿ ಅನುಮತಿ ಕೇಳಿ ೧೦ ತಿಂಗಳಾದರೂ ರಾಜ್ಯಪಾಲರು ಕ್ರಮ ಕೈಗೊಳ್ಳದೆ ಮೌನವಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಮೇಲಿನ ದೂರಿನ ಕಡತಗಳು ಧೂಳು ಹಿಡಿದಿವೆ. ಹೀಗಿರುವಾಗ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವುದಕ್ಕಾಗಿ ಕುತಂತ್ರ ನಡೆಸಿದ್ದು ನೋಡಿದರೆ ಇವರು ರಾಜ್ಯಪಾಲರೋ ಅಥವಾ ವಿರೋಧ ಪಕ್ಷಗಳ ಎಜೆಂಟರೋ ಎನ್ನುವ ಅನುಮಾನ ಮೂಡುವಂತಾಗಿದೆ ಎಂದರು.
ಇನ್ನೂ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಕಾನೂನು ಹೋರಾಟದಲ್ಲಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆಗೆ ಅಸಂಖ್ಯಾತ ಅಭಿಮಾನಿಗಳು ಜೊತೆಗಿದ್ದೇವೆ ಎಂದು ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

