ವಿಜಯಪುರ: ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲಿ ಆ.೨೧ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಅಂದು ಮಧ್ಯಾಹ್ನ ೧ ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
