Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನುಲಿಯ ಚಂದಯ್ಯ ವಚನಗಳಲ್ಲಿ ಕಾಯಕ ಮಹತ್ವದ ಚಿಂತನೆ :ಚನಗೊಂಡ
(ರಾಜ್ಯ ) ಜಿಲ್ಲೆ

ನುಲಿಯ ಚಂದಯ್ಯ ವಚನಗಳಲ್ಲಿ ಕಾಯಕ ಮಹತ್ವದ ಚಿಂತನೆ :ಚನಗೊಂಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೧೨ನೇ ಶತಮಾನದ ಬಸವಾದಿ ಶರಣರ ಸಮಕಾಲೀನರಾದ ಶರಣ ನುಲಿಯ ಚಂದಯ್ಯ ಅವರ ವಚನಗಳಲ್ಲಿ ಕಾಯಕ ಹಾಗೂ ದಾಸೋಹ ಮಹತ್ವದ ಚಿಂತನೆಗಳು ಹಾಸುಹೊಕ್ಕಾಗಿವೆ. ಇವರ ಜೀವನಾದರ್ಶ ಹಾಗೂ ಅವರ ಚಿಂತನೆಗಳನ್ನು ನಮ್ಮ ಜೀವನದಲ್ಲ್ಲಿ ಅಳವಡಿಸಿಕೊಳ್ಳಬೇಕು. ಇವರ ತತ್ವಾದರ್ಶ ಎಂದೆಂದಿಗೂ ದಾರಿದೀಪವಾಗಿವೆ ಎಂದು ವಿಜಯಪುರ ತಹಶೀಲ್ದಾರ್ ಪ್ರಶಾಂತ ಚನಗೊಂಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ವಿಜಯಪುರ ಜಿಲ್ಲೆಯ ಶಿವಣಗಿಯರಾದ ಶರಣ ನುಲಿಯ ಚಂದಯ್ಯನವರು, ಕಾಯಕ ತತ್ವದ ಮಹತ್ವವನ್ನು ವಚನಗಳ ಮೂಲಕ ಸಾರಿ, ಭಾವಶುದ್ಧತೆಯಿಂದ ಕಾಯಕ ಮಾಡಬೇಕೆನ್ನುವ ನಿಟ್ಟಿನಲ್ಲಿ ಜೀವನ ನಡೆಸಿ ಮನುಕುಲದ ಉನ್ನತಿಗೆ ಶ್ರಮಿಸಿದ್ದಾರೆ. ಅವರ ವಿಚಾರಗಳನ್ನು ಅಳವಡಿಸಿಕೊಂಡು ಆದರ್ಶಮಯವಾದ ಜೀವನ ನಡೆಸಬೇಕು ಎಂದು ಹೇಳಿದರು.
ಪ್ರವಾಸೊಧ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಅವರು ಮಾತನಾಡಿ, ಶರಣರ ಚಿಂತನೆಗಳ ಅಧ್ಯಯನ ಮಾಡುವ ಮೂಲಕ ಅವರ ಶರಣರ ವಚನಗಳು ಹಾಗೂ ಸಂದೇಶಗಳ ಸಾರ ಇಂದಿನ ಯುವ ಜನತೆ ಅರಿತುಕೊಳ್ಳಬೇಕು ಎಂದು ಹೇಳಿದರು.
ವಿದ್ಯಾವತಿ ಅಂಕಲಗಿ ಅವರು ಉಪನ್ಯಾಸ ನೀಡಿ,ಶರಣ ಅನುಭಾವಿ, ವಚನಕಾರ ನುಲಿಯ ಚಂದಯ್ಯ ಅವರ ಕಾಯಕ ನಿಷ್ಠೆ ಅಪಾರ. ಅವರ ವಚನಗಳಲ್ಲಿ ಸಮಸಮಾಜದ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಕವಾಗಿವೆ. ವಿಜಯಪುರ ಜಿಲ್ಲೆಯ ಶಿವಣಗಿ ಚಂದಯ್ಯ ಅವರ ಹುಟ್ಟೂರು. ಬಸವಾದಿ ಶರಣರೊಂದಿಗೆ ಅನುಭವ ಮಂಟಪದಲ್ಲಿದ್ದ ಶರಣ ಚಂದಯ್ಯ ಚಂದೇಶ್ವರಲಿಂಗ ಎಂಬ ನಾಮಾಂಕಿತದಿಂದ ತಮ್ಮ ವಚನಗಳನ್ನು ರಚಿಸಿದ್ದಾರೆ ಎಂದರು.
ಗೋವಿಂದರಾವ್ ವಾಜಂತ್ರಿ ಅವರು ಮಾತನಾಡಿದರು. ಶ್ರೀಮತಿ ದಾನಮ್ಮ ಅಲ್ದಿ ಹಾಗೂ ಸಂಗಡಿಗರು ಸುಮಧುರ ವಚನ ಗಾಯನ ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ವಿಭಾಗದ ಅಧಿಕಾರಿ ಎ.ಬಿ. ಅಲ್ಲಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ರವೀಂದ್ರ ಜಾಧವ, ಶ್ರೀದೇವಿ ಉತ್ಲಾಸಕರ್, ಕೃಷ್ಣ ಭಜಂತ್ರಿ, ವಸಂತ ಭಜಂತ್ರಿ, ಅಶೋಕ್ ಜಾಧವ್, ಭೀಮಶಿ ಭಜಂತ್ರಿ, ಗಿರಿಮಲ್ಲಪ್ಪ ಭಜಂತ್ರಿ, ಹಣಮಂತ ಭಜಂತ್ರಿ ದರ್ಗಾ, ದೇವೆಂದ್ರ ಮಿರೇಕರ, ಸುಭಾಸ್ ಕನ್ನೂರ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ ನೀಡಿದ ಬಬಲೇಶ್ವರ

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಬೆಳಿಗ್ಗೆ ೯.೩೦ ಗಂಟೆಗೆ ಆರಂಭವಾದ ನುಲಿ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಚಾಲನೆ ನೀಡಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಪ್ರವಾಸೊಧ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಉಪಸ್ಥಿತರಿದ್ದರು.
ಮೆರವಣಿಗೆಯು ಕಲಾ ತಂಡದೊಂದಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಕನಕದಾಸ ವೃತ್ತದಿಂದ ಆಗಮಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.