ವಿಜಯಪುರ: ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೆಟ್ರಿಕ್ ನಂತರದ ಇಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಈಚೆಗೆ ಉದ್ಘಾಟಿಸಿದರು.
ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ರೂ.೨ ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ ವಾಸ ಮಾಡುವ ವಿದ್ಯಾರ್ಥಿಗಳು ಸ್ವಚ್ಛ ಹಾಗೂ ಹಾಳಾಗದಂತೆ ಉತ್ತಮವಾಗಿ ಉಪಯೋಗಿಸಿಕೊಳ್ಳಬೇಕು. ನಿಮ್ಮಂತೆ ಮುಂದೆ ಬರುವ ಬಡ ಮಕ್ಕಳಿಗೂ ಅನುಕೂಲ ಆಗಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಸಕರು ಕಿವಿಮಾತು ಹೇಳಿದರು.
ನಂತರ ಸಮಾರಂಭಕ್ಕೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಪ್ಪ ಆಶಾಪೂರ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

