Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರ ಬದುಕು ನಮಗೆ ಪ್ರೇರಣೆ :ಸೋಮನಕಟ್ಟಿ
(ರಾಜ್ಯ ) ಜಿಲ್ಲೆ

ಬಸವಾದಿ ಶರಣರ ಬದುಕು ನಮಗೆ ಪ್ರೇರಣೆ :ಸೋಮನಕಟ್ಟಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: 12 ನೇ ಶತಮಾನದ ಬಸವಾದಿ ಶರಣರ ಬದುಕು ನಮಗೆ ಸದಾಕಾಲಕ್ಕೆ ಪ್ರೇರಣೆಯಾಗಿದೆ. ಬಸವಾದಿ ಶರಣರಲ್ಲಿ ಒಬ್ಬರಾಗಿದ್ದ ನೂಲಿಯ ಚಂದಯ್ಯ ಅವರ ಕಾಯಕ ತತ್ವ ಸರ್ವಕಾಲಕ್ಕೂ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ನೂಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನೂಲಿಯ ಚಂದಯ್ಯ ಭಾವಚಿತ್ರಕ್ಕೆ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಮಹಾಮಾನವತಾವಾದಿ ಬಸವಣ್ಣವರ ನೇತೃತ್ವದಲ್ಲಿ 12 ನೇ ಶತಮಾನದಲ್ಲಿ ಸಮಾಜ ಪರಿವರ್ತನೆಗೆ ದೊಡ್ಡ ಕ್ರಾಂತಿ ನಡೆಯಿತು. ಬಸವಣ್ಣವರ ಕ್ರಾಂತಿಗೆ ಹಲವಾರು ಶರಣರು ಕೈ ಜೋಡಿಸಿದ್ದರು. ಅದರಲ್ಲಿ ಪ್ರಮುಖವಾಗಿ ನೂಲಿಯ ಚಂದಯ್ಯನವರು ಕೂಡ ಒಬ್ಬರಾಗಿದ್ದರು.ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದ ಚಂದಯ್ಯನವರು ಸರ್ವಕಾಲಕ್ಕೂ ನಮಗೆ ಪ್ರೇರಣೆಯಾಗಿ ನಿಲ್ಲುತ್ತಾರೆ. ಶರಣರ ವಚನಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು
ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ, ಬಸವಣ್ಣನವರು ಬಿದ್ದವರನ್ನು ಮೇಲೆತ್ತಿದ ಧ್ವನಿ ಇಲ್ಲದವರಿಗೆ ಧ್ವನಿ ನೀಡಿದ ಮಹಾನ್ ವ್ಯಕ್ತಿತ್ವ ಹೊಂದಿದ್ದರು.ಅವರ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಳಕಳಿಗೆ ಸಮಾಜದಲ್ಲಿ ಕೆಳಸ್ತರದ ಅನೇಕ ಶರಣರು ಬಸವಣ್ಣನವರ ಜೊತೆಗೆ ಒಂದಾಗಿ ವಚನ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಮೇಲು-ಕೀಳು ಎನ್ನದೆ ಬಸವಣ್ಣನವರು ಎಲ್ಲರಿಗೂ ಅವಕಾಶ ಕೊಟ್ಟಿದ್ದರು. ಅಂತಹ ಶರಣರಲ್ಲಿ ನೂಲಿಯ ಚಂದಯ್ಯನವರು ಪ್ರಮುಖ ರಾಗಿದ್ದರು. ಕಾಯಕಕ್ಕೆ ಹೆಚ್ಚಿನ ಒತ್ತು ಕೊಟ್ಟ ನೂಲಿಯ ಚಂದಯ್ಯನವರು ಸಮಾಜದ ಓರೆ ಕೋರೆಗಳನ್ನು ಯಾವುದೇ ಮುಚ್ಚು ಮರೆ ಇಲ್ಲದೇ ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.
ಯಾವುದೇ ಶರಣರು ಯಾವುದೇ ಜಾತಿಗೆ ಧರ್ಮಕ್ಕೆ ಸೀಮಿತವಾಗಿಲ್ಲ. ಅವರು ಮನುಕುಲದ ಆಸ್ತಿಯಾಗಿದ್ದಾರೆ. ಸಾಧ್ಯವಾದಷ್ಟು ಶರಣರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ಕಚೇರಿ ಅಧೀಕ್ಷಕ ಎಂ.ಎಂ. ದಫೇದಾರ, ಸಿಡಿಪಿಓ ಕಚೇರಿಯ ಬೋರಮ್ಮ ಬಿರಾದಾರ, ಖಜಾನೆ ಇಲಾಖೆಯ ಮನೋಜಕುಮಾರ ಪಾಟೀಲ, ಸಮಾಜದ ಮುಖಂಡರುಗಳಾದ ಬಸವರಾಜ ಭಜಂತ್ರಿ ,ಸೀತಾರಾಮ ಭಜಂತ್ರಿ, ಸಿದ್ದರಾಮ ಭಜಂತ್ರಿ ಇತರರು ಭಾಗವಹಿಸಿದ್ದರು. ವಿರೇಶ ಗೂಡ್ಲಮನಿ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ಹಳ್ಳೂರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.