ಸಿಂದಗಿ: ಕಳೆದ 15ತಿಂಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಮಾಡಿದ್ದು ನನಗೆ ಸಂತಸ ತಂದಿದೆ. ಮತಕ್ಷೇತ್ರದ ಜನ ನನಗೆ ಕೈಬೀಡುವುದಿಲ್ಲ. ಏ.19 ರಂದು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮತಕ್ಷೇತ್ರದ ಅಭ್ಯರ್ಥಿ ರಮೇಶ ಭೂಸನೂರ ಹೇಳಿದರು.
ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸೋಮವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏ.೧೯ರಂದು ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ, ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತದ ಮಾರ್ಗದ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ಬಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.
ಚುನಾವಣಾ ಉಸ್ತುವಾರಿ ಬಾಲಚಂದ್ರ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ರಾಜಶೇಖರ ಪೂಜಾರಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಂತೋಷ ಪಾಟೀಲ ಡಂಬಳ, ಎಂ.ಎಸ್. ಮಠ, ಶಿವುಕುಮಾರ ಬಿರಾದಾರ, ಗುರು ತಳವಾರ ಸೇರಿದಂತೆ ಅನೇಕರಿದ್ದರು.