Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಛಾಯಾಗ್ರಾಹಕರು ಮಾಧ್ಯಮದ ಅವಿಭಾಜ್ಯ ಅಂಗ :ಆಯೇಷಾ ಖಾನಂ
(ರಾಜ್ಯ ) ಜಿಲ್ಲೆ

ಛಾಯಾಗ್ರಾಹಕರು ಮಾಧ್ಯಮದ ಅವಿಭಾಜ್ಯ ಅಂಗ :ಆಯೇಷಾ ಖಾನಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಫೋಟೋ ಜರ್ನಲಿಸ್ಟ್‌ಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದನೆ

ಬೆಂಗಳೂರು: ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು.
ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ, ಛಾಯಾಗ್ರಾಹಕರು ಪತ್ರಿಕೋದ್ಯಮದಲ್ಲಿ ಸುದ್ದಿಯ ಮೂಲ ವ್ಯಕ್ತಿಗಳಾಗಿದ್ದು, ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾಗಿದೆ. ಇದರಿಂದಾಗಿ ಮಾಧ್ಯಮಗಳ ಬೆಳವಣಿಗೆಯೂ ಆಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಷಾ ಖಾನಂ ಅಭಿಪ್ರಾಯಪಟ್ಟರು.
ಯುವ ಪತ್ರಕರ್ತರು ಛಾಯಾಗ್ರಾಹಕರೊಂದಿಗೆ ಉತ್ತಮ ಭಾಂದವ್ಯ ಬೆಳೆಸಬೇಕಾದುದು ಇಂದಿನ ಪರಿಸ್ಥಿತಿಗೆ ಅತ್ಯಗತ್ಯ. ಮಾಧ್ಯಮದಲ್ಲಿ ಅವಿಭಾಜ್ಯ ಅಂಗದಂತಿರುವ ಛಾಯಾಗ್ರಾಹಕರ ದೃಷ್ಟಿಕೋನ ನಿಜಕ್ಕೂ ಮಹತ್ವಪೂರ್ಣ ಎಂದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಭೆ, ಸಮಾರಂಭಗಳಲ್ಲಿ ಅಷ್ಟೆ ಅಲ್ಲ, ಪ್ರಕೃತಿ ವಿಕೋಪಗಳ ಸಂಕಷ್ಟ ಮತ್ತು ಸಂಘರ್ಷ ಹಾಗೂ ಅವಘಡಗಳ ಸಂದರ್ಭದಲ್ಲಿಯೂ ಪೋಟೋ ಜರ್ನಲಿಸ್ಟ್‌ಗಳು ಅತ್ಯಮೂಲ್ಯ ಕೆಲಸ ಮಾಡಿ ತಮ್ಮ ವೃತ್ತಿ ಬದ್ದತೆಯನ್ನು ಮೆರೆದಿರುವುದು ಅಭಿನಂದಾರ್ಹವಾದದ್ದು ಎಂದರು.
ಮುದ್ರಣ ಮಾಧ್ಯಮದಲ್ಲಿ ಛಾಯಾಗ್ರಾಹರ ಪಾತ್ರ ಹಿರಿದಾಗಿದೆ, ವಿಡಿಯೋ ಜರ್ನಲಿಸ್ಟ್‌ಗಳು ದೊಡ್ಡ ಸಂಖ್ಯೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸಂಘವು ಅವರ ಸೇವೆಯನ್ನು ಗುರುತಿಸಿ ಈ ವಿಶೇಷ ದಿನದಲ್ಲಿ ಸನ್ಮಾನಿಸುವ ಮೂಲಕ ಅವರ ಬೆನ್ನು ತಟ್ಟುವ ಕೆಲಸ ಮಾಡುತ್ತಿದೆ ಎಂದರು.
ಐ.ಎ್.ಡಬ್ಲ್ಯೂ.ಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ ಮಾತನಾಡಿ, ಛಾಯಾಗ್ರಾಹಕರು ಮುದ್ರಣ ಮಾಧ್ಯಮದ ಸುದ್ದಿಯ ಕಣಜವಾಗಿದ್ದಾರೆ. ಅವರ ಸೇವೆಯನ್ನು ಮಾಧ್ಯಮಗಳು ಮರೆಯಲು ಸಾಧ್ಯವೇ ಇಲ್ಲ ಎಂದು ಹೇಳಿ ಛಾಯಾಗ್ರಾಹರನ್ನು ಶ್ಲಾಘಿಸಿದರು.
ಹಿರಿಯ ಛಾಯಾಗ್ರಾಹಕರಾದ ಗೋಪಿನಾಥ್ ಮಾತನಾಡಿ, 185 ವರ್ಷಗಳ ಹಿಂದೆ ಪೋಟೋಗ್ರಫಿ ಪ್ರಾರಂಭವಾದ ಇತಿಹಾಸದ ಘಟನೆಗಳನ್ನು ಮೆಲುಕು ಹಾಕಿದರು. ಡಿಜಿಟಲ್ ಯುಗದಲ್ಲಿ ಮೊಬೈಲ್ ಇರುವ ಎಲ್ಲರೂ ಪೋಟೋಗ್ರಾರ್‌ಗಳೇ ಆಗಿದ್ದಾರೆ ಎಂದರು.
ಮುಖ್ಯಮಂತ್ರಿಗಳ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಶ್ವೇಶ್ವರಪ್ಪ, ಪ್ರಕಾಶ್, ದಿ ಹಿಂದೂ ಪತ್ರಿಕೆಯ ಗೋಪಿನಾಥ್, ಕನ್ನಡಪ್ರಭದ ವೀರಮಣಿ, ವಿಜಯವಾಣಿಯ ರಾಘವೇಂದ್ರ, ಇಂದು ಸಂಜೆಯ ಶರಣ ಬಸಪ್ಪ, ಚಂದ್ರು ಹಾಲಪ್ಪ ಅವರ ಸೇವೆ ಸ್ಮರಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಕಾರ್ಯಕಾರಿ ಸದಸ್ಯ ಸೋಮಶೇಖರ ಗಾಂಧಿ ಬೆಂಗಳೂರು ನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಉಪಾಧ್ಯಕ್ಷ ಕೆ.ಎಂ.ಜಿಕ್ರಿಯಾ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಜಯರಾಂ, ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್ ಮತ್ತು ವೀರೇಶ್ ಸೇರಿದಂತೆ ಹಲವರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.