ವಿಜಯಪುರ: ಭಾರತ ಚುನಾವಣಾ ಆಯೋಗವು ೦೧.೦೧.೨೦೨೫ ನ್ನು ಅರ್ಹತಾ ದಿನಾಂಕವಾಗಿ ಭಾವಚಿತ್ರ ಸಹಿತ ಮತದಾರರ ಪಟ್ಟಿಯ ಪರಿಷ್ಕರಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕಾಗಿ ದಿನಾಂಕ:೨೦-೮-೨೦೨೪(ಮಂಗಳವಾರದಿಂದ) ರಿಂದ ೧೮-೧೦-೨೦೨೪ (ಶುಕ್ರವಾರ) ರವರೆಗೆ ಪ್ರತಿ ಮನೆ-ಮನೆಗೆ (ಊ೨ಊ) ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ದಿನಾಂಕ:೧-೧೦-೨೦೨೪ಕ್ಕೆ ನೋಂದಣಿಯಾಗದ ಅರ್ಹ ನಾಗರಿಕರು. ಮುಂಬರುವ ಅರ್ಹತಾ .(ದಿನಾಂಕ:೧-೧೦-೨೦೨೫) ದಿನಾಂಕದಂತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಈ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಯಾವುದೇ ರೀತಿಯ ತಿದ್ದುಪಡಿ, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದು ಹಾಕುವ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನದ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದು, ಸಾರ್ವಜನಿಕರು ಅರ್ಜಿ ನಮೂನೆ ೬ ಮತ್ತು ೮ನ್ನು ಸಲ್ಲಿಸುವಾಗ ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದು. ಎಲ್ಲಾ ರೀತಿಯ ಚುನಾವಣಾ ಸಂಬಂಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ನಲ್ಲಿ ವೋಟರ್ಸ್ ಹೆಲ್ಘ್ಲೈನ್ ಅಫ್ಲಿಕೇಷನ್ ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ದಿನಾಂಕ:೨೯-೧೦-೨೦೨೪ ಮಂಗಳವಾರ ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಣೆ, ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತು ದಿನಾಂಕ:೨೯-೧೦-೨೦೨೪ ಮಂಗಳವಾರದಿಂದ ದಿನಾಂಕ:೨೮-೧೧-೨೦೨೪ ಗುರುವಾರದವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಯ ಅವಧಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನಿಗದಿಪಡಿಸುವ ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನದ ದಿನಾಂಕಗಳನ್ನು ಹಮ್ಮಿಕೊಳ್ಳಲಾಗುವುದು.
ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ದಿನಾಂಕ:೨೪-೧೨-೨೦೨೪ ಮಂಗಳವಾರ ದೊಳಗೆ ಮುಗಿಸಲಾಗುವುದು. ದಿನಾಂಕ:೧-೧-೨೦೨೫ ಬುಧವಾರದೊಳಗೆ ಮತದಾರರ ಪಟ್ಟಿಗಳ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಹಾಗೂ ಅಂತಿಮ ಪಟ್ಟಿಯ ಪ್ರಕಟಣೆಗಾಗಿ ಆಯೋಗದ ಅನುಮತಿ ಕೋರಿ ದತ್ತಾಂಶ ವನ್ನು ನವೀಕರಿಸಲಾಗುವುದು. ೬-೧-೨೦೨೫ರ ಸೋಮವಾರದಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.
ಜಿಲ್ಲೆಯ ಅರ್ಹ ಮತದಾರರು ಈ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಕೊಳ್ಳುವ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಮತದಾರ ಪಟ್ಟಿ ಪರಿಷ್ಕರಣೆ: ಅರ್ಹ ಮತದಾರರು ಹೆಸರು ನೊಂದಾಯಿಸಲು ಮನವಿ
Related Posts
Add A Comment
