Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ
(ರಾಜ್ಯ ) ಜಿಲ್ಲೆ

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ೩ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ೩೧ ಸಾವಿರ ರೂ. ದ್ವಿತೀಯ ೨೧ ಸಾವಿರ ರೂ. ಮತ್ತು ತೃತೀಯ ೧೧ ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ೩ ಸಾವಿರ ರೂ. ದ್ವಿತೀಯ ೨ ಸಾವಿರ ರೂ ಮತ್ತು ತೃತೀಯ ೧ ಸಾವಿರ ರೂ. ಬಹುಮಾನ ನೀಡಲಾಗುವುದು.
ಪ್ರೌಢ ಶಾಲಾ ವಿಭಾಗ:- ೧) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ೨) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, ೩) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ೪) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು ೯೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗ :- ೧) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ೨) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, ೩) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, ೪) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು ೧೫೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :- ೧) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, ೨) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, ೩) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ‍್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, ೪) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, ೫) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು ೨೦೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ದಿನಾಂಕ : ೦೬-೦೯-೨೦೨೪ ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ದಿನಾಂಕ : ೧೦-೦೯-೨೦೨೪ ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.
ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (೩) ಪ್ರಬಂಧಗಳಿಗೆ ಅಕ್ಟೋಬರ್ ೦೨ ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.
ನಿಬಂಧನೆಗಳು :ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.