ವಿಜಯಪುರ: ಕೌಶಲಾಭಿವೃದ್ಧಿ ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೆ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಮಹಾನಗರ ಪಾಲಿಕೆ ಕಾರ್ಯಾಲಯದ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಧೃಡೀಕೃತ ದಾಖಲೆಗಳೊಂದಿಗೆ ದಿನಾಂಕ: ೩೧-೦೮-೨೦೨೪ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ ಡೇ-ನಲ್ಮ್ ಯೋಜನೆಯ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರ ಪ್ರಕಟನೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
