ಇಂಡಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ವಿದ್ಯಾರ್ಥಿ ವೇತನ,
ಬಡ ಮಕ್ಕಳಿಗಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ಪರಿಚಯಿಸಿದ ಅರಸು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳು ಅಪಾರ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಡಿ.ದೇವರಾಜ ಅರಸು ಮತ್ತು ಬ್ರಹ್ಮರ್ಷಿ ನಾರಾಯಣ ಗುರು ಅವರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಅರಸು ಅವರು ಜೀತದಾಳು ಹಾಗೂ ಮಲಹೊರುವ ಪದ್ಧತಿ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿ, ಎಲ್ಲಾ ಬಡವರಿಗೂ ವಸತಿ ಸೌಲಭ್ಯ, ಶಿಕ್ಷಣದಲ್ಲಿ ಸಮಾನತೆ ಕಲ್ಪಿಸುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಿದರು. ಮೌನಕ್ರಾಂತಿ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದರು ಎಂದು ಹೇಳಿದರು.
ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಸಮಾಜಸುಧಾರಣೆಗೆ ಅಧ್ಯಾತ್ಮಸ್ಪರ್ಶದ ಅಪೂರ್ವ ಕಾಂತಿಯನ್ನು ಒದಗಿಸಿದವರು ನಾರಾಯಣಗುರು.
ಸಮಾಜಸುಧಾರಣೆ ಎನ್ನುವುದು ನಿರಂತರ ಪ್ರಕ್ರಿಯೆ. ನಮ್ಮ ಸಮಾಜದ ಶುದ್ಧೀಕರಣ ಕಾರ್ಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು ನಮಗೆಲ್ಲ ಬೆಳಕಾಗಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ ಮಾತನಾಡಿ,ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ತ್ವಪಾಲನೆಯಡಿ ಹತ್ತಾರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಕೆಜಿಎಸ್ ಎಸ್ ಡಿ ಎಂ ಸಿ ಉಪಾಧ್ಯಕ್ಷ ಪರಶುರಾಮ ಹೊಸಮನಿ ಹಾಗೂ ಪದಾಧಿಕಾರಿಗಳು, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ಎಸ್ ಎಸ್ ಅರಬ, ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಪಿ ಪೂಜಾರಿ, ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಜೆ ಎಂ ಪತಂಗಿ, ಎಸ್ ಬಿ ಕುಲಕರ್ಣಿ, ಎಫ್ ಎ ಹೊರ್ತಿ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ, ಎಸ್ ಡಿ ಬಿರಾದಾರ ಸೇರಿದಂತೆ ಅತಿಥಿ ಶಿಕ್ಷಕರಾದ ಯಲ್ಲಮ್ಮ ಸಾಲೋಟಗಿ, ಪ್ರಜ್ವಲ ಕುಲಕರ್ಣಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

