ಇಂಡಿ: ರಾಜ್ಯದಲ್ಲಿ ಭೂಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು. ಸಮಾಜಮುಖಿ ಕಾರ್ಯಗಳತ್ತ ಅವರ ಮನಸು ಸದಾ ತುಡಿಯುತ್ತಿತ್ತು’ ಎಂದು ಹೇಳಿದರು.
ಇನ್ನೂ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕಾಂತು ಇಂಡಿ ಉಪನ್ಯಾಸ ನೀಡಿದ ಅವರು, ಅಧಿಕಾರ, ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯ ಹೊರತಾಗಿ ನಿಜವಾದ ಅಭಿವೃದ್ದಿಯನ್ನು ಕಾಣಲು ಅಸಾಧ್ಯ. ಅರ್ಥಿಕ ಸ್ವಾತಂತ್ರ್ಯ ಇಲ್ಲದ, ರಾಜಕೀಯ ಸ್ವತಂತ್ರ್ಯದಿಂದ ಸರ್ವರನ್ನೊಳಗೊಂಡ ಅಭಿವೃದ್ದಿ ಕರ್ನಾಟಕದ ರಾಜಕೀಯ ಮತ್ತು ಆಡಳಿತ ಎಪ್ಪತರ ದಶಕದಲ್ಲಿ ಹೊಸ ತಿರುವು ಕೊಟ್ಟವರು. ರಾಜ್ಯದಲ್ಲಿ ರಾಜಕೀಯ, ಸಾಮಾಜಿಕ, ಮತ್ತು ಅರ್ಥಿಕ ಪರಿವರ್ತನೆಗೆ ನಾಂದಿ ಹಾಡಿ ಪರಿವರ್ತನೆಯ ಹರಿಕಾರರು ಎನಿಸಿಕೊಂಡಿವರು ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿಂದುಳಿದ ಇಲಾಖೆ ಅಧಿಕಾರಿ ಎಸ್.ಆರ್.ಗದ್ಯಾಳ, ಎಸ್.ಆರ್.ನಡಗಡ್ಡಿ, ಎಸ್.ಎಂ.ಪಾಟೀಲ, ಬಸವರಾಜ ಗೊರನಾಳ, ಶಿಕ್ಷಕಿ ಪಿ.ಎಚ್.ಹೂಗಾರ ಮಾತನಾಡಿದರು.
ವೇದಿಕೆಯ ಮೇಲೆ ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್ ಓ ಮಂಜುನಾಥ ಧುಳೆ,ಸಹಕಾರಿ ಸಂಘದ ನಿರ್ದೇಶಕ ಕೆ.ಎಚ್.ವಡ್ಡರ,ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣ ,ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ,ಅಲೇಮಾರಿ ಸಂಘದ ಅಧ್ಯಕ್ಷ ವೆಂಕಟೇಶ ಭೈರಾಮಡಗಿ ಮತ್ತಿತರಿದ್ದರು.
ಹಿಂದುಳಿದ ವರ್ಗದ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ, ಬಾಷಣ,ರಸಪ್ರಶ್ನೆ, ೧೦೦ ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಕಬಡ್ಡಿ, ಕ್ರಿಕೆಟನಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನಗಳಿಸಿದವರಿಗೆ ಬಹುಮಾನ ಪ್ರಶಸ್ತಿ ಪತ್ರ ನೀಡಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

