ಸಿಂದಗಿ: ಗ್ರಾಮೀಣ ಪ್ರದೇಶಗಳಿಗೆ ರಸ್ತೆ ಸಾರಿಗೆ ಬಸ್ಸಿನ ಸೌಲಭ್ಯಗಳು ದೊರೆಯುವಂತಾಗಲಿ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸೋಮವಾರ ಸಾಯಂಕಾಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಹಾಗೂ ಗ್ರಾಮಸ್ಥರ ಬೇಡಿಕೆಯ ಮೇರೆಗೆ ಸಿಂದಗಿಯಿಂದ ಚಾಂದಕವಟೆ-ಬಂಥನಾಳ-ತಾಂಬಾ ಮಾರ್ಗವಾಗಿ ವಿಜಯಪುರ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಈ ಭಾಗಕ್ಕೆ ಸಾರ್ವಜನಿಕರ ಬೇಡಿಕೆ ಇತ್ತು. ಇಲ್ಲಿನ ವಿದ್ಯಾರ್ಥಿಗಳ, ರೈತರ, ಗ್ರಾಮಸ್ಥರು ನಗರಕ್ಕೆ ತೆರಳಲು ಪರದಾಡುತ್ತಿದ್ದರು, ಇನ್ನೂ ಮುಂದೆ ಇದು ಜನರಿಗೆ ಅನುಕೂಲವಾಗಲಿದೆ ಎಂದರು.
ಇದೆ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕ ರೇವಣಸಿದ್ದ ಖೈನೂರ, ಭೀಮು ವಾಲೀಕಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

