Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಲಿ!
(ರಾಜ್ಯ ) ಜಿಲ್ಲೆ

ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಲಿ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗವರ್ನರ್ ಒಂದು ಸಾಂವಿಧಾನಿಕ ಹುದ್ದೆ | ಕೇಂದ್ರ ಸರ್ಕಾರದ ಪ್ರತಿನಿಧಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿಗಳ ಪ್ರತಿನಿಧಿಯಂತೆ ಕಾರ್ಯನಿರ್ವಹಿಸಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಷಯದಲ್ಲಿ ಕೆಲವರನ್ನು ಮಾತ್ರ ಆಯ್ಕೆ ಮಾಡಬಾರದು. ಗವರ್ನರ್ ಒಂದು ಸಾಂವಿಧಾನಿಕ ಹುದ್ದೆ ಮತ್ತು ನಾವು ಅದನ್ನು ಗೌರವಿಸುತ್ತೇವೆ. ನಾವು ಹೇಳುವುದೇನೆಂದರೆ ಅವರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ 17ಎ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ರ ಸೆಕ್ಷನ್ 218 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಆಗಸ್ಟ್ 16 ರಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2023 ರ ನವೆಂಬರ್ 23 ರಂದು ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಲೋಕಾಯುಕ್ತರು ರಾಜ್ಯಪಾಲರ ಅನುಮತಿ ಕೋರಿದೆ. ಆದರೆ ಇಲ್ಲಿಯವರೆಗೆ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
2007ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಖಾಸಗಿ ಸಂಸ್ಥೆಗೆ ಕಾನೂನು ಉಲ್ಲಂಘಿಸಿ ಗಣಿ ಗುತ್ತಿಗೆ ನೀಡಿರುವ ಆರೋಪದಡಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತ ಸೋಮವಾರ ಮತ್ತೊಮ್ಮೆ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದೆ.
ಬಿಜೆಪಿಯ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ದನ ರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಲೋಕಾಯುಕ್ತಕ್ಕೆ ಅನುಮತಿ ನೀಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಮತ್ತೊಂದೆಡೆ, ಟಿ ಜೆ ಅಬ್ರಹಾಂ ಅವರು ಜುಲೈ 26 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರಿಗೆ ನನ್ನ ವಿರುದ್ಧ(ಖಾಸಗಿ) ದೂರು ಸಲ್ಲಿಸಿದರು ಮತ್ತು 10 ಗಂಟೆಗಳ ನಂತರ ನನಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಇದು ತಾರತಮ್ಯವಲ್ಲವೇ? ಆ ಕಾರಣದಿಂದಲೇ ಪಿಕ್ ಆ್ಯಂಡ್ ಸೆಲೆಕ್ಟ್ ಮಾಡಬೇಡಿ ಎಂದು ರಾಜ್ಯಪಾಲರಿಗೆ ತಿಳಿಸಲಾಗಿದೆ ಎಂದರು.

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬೆಂಬಲಿಗರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವ ಅಹಿಂದ ಸಮುದಾಯಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.
ಇದೀಗ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿರುವ ಅಹಿಂದ ಸಮುದಾಯಗಳ ಮುಖಂಡರು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಒಕ್ಕೂಟವು ಆಗಸ್ಟ್ 21 ಮತ್ತು 27 ರಂದು ಬೃಹತ್ ಪ್ರತಿಭಟನೆಗಳನ್ನು ಘೋಷಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.