Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ: ಡಿಸಿಎಂ
(ರಾಜ್ಯ ) ಜಿಲ್ಲೆ

ಆಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ: ಡಿಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ”ಎಂದು ತಿಳಿಸಿದರು.
ಈ ಆಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಏನು ಕೆಲಸ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ ಎಂದರು.
ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಜನ ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಎಲ್ಲರ ಬಳಿ ಯಾವ, ಕೆಲಸಗಳನ್ನು ಮಾಡಬಹುದು ಎಂದು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ಪರಿಹಾರ ನೀಡಬಹುದು ಎಂಬುದರ ಕುರಿತು ತೀರ್ಮಾನ ಮಾಡಲಾಗುವುದು. ಪುನರ್ವಸತಿ ವಿಚಾರವಾಗಿ ಅವಗಾಹನೆ ನಡೆಸಬೇಕಿದೆ. ಈಗಾಗಲೇ ಕಳೆದ ವರ್ಷದ ಏಪ್ರಿಲ್, ನವೆಂಬರ್ ಅಲ್ಲಿ ತಪಾಸಣೆ ನಡೆಲಾಗಿದೆ” ಎಂದು ಹೇಳಿದರು.
ಕೃಷ್ಣ ನದಿ ನೀರಿನ ಬಳಕೆ ಬಗ್ಗೆ ಪ್ರಶ್ನೆ ಕೇಳಿದಾಗ “ನಮ್ಮ ರಾಜ್ಯದ ಪಾಲಿನ ಒಂದು ಹನಿ ನೀರನ್ನು ಸಹ ರೈತರ ಹಿತ ಕಾಪಾಡಲು ಬಳಕೆ ಮಾಡಲಾಗುವುದು. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೆ ನೀಡಿ” ಎಂದರು.
ತಮಿಳುನಾಡಿಗೆ ಹೆಚ್ಚುವರಿ 100 ಟಿಎಂಸಿ ನೀರು ಹರಿದಿದೆ
“ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಎಲ್ಲಾ ಕಾರಣಗಳನ್ನಿಟ್ಟುಕೊಂಡು ಮೇಕೆದಾಟು ಯೋಜನೆ ಅನುಮತಿಗೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.
“ಕಳೆದ ವರ್ಷ ರಾಜ್ಯದ 220 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಮೋಡಕ್ಕೆ ಯಾವ ಸರ್ಕಾರ ಇದೆ ಎಂದು ಗೊತ್ತಾಗುತ್ತದೆಯೇ? ಮೂರು- ನಾಲ್ಕು ವರ್ಷಗಳಿಗೆ ಒಮ್ಮೆ ಬರಗಾಲ ಬರುವುದು ಪ್ರಕೃತಿ ನಿಯಮ. ರಾಜ್ಯದ ಎಲ್ಲಾ ಪ್ರಮುಖ ಅಣೆಕಟ್ಟುಗಳು ತುಂಬಿವೆ. ಒಂದಷ್ಟು ಜಿಲ್ಲೆಗಳಲ್ಲಿ ಕೆರೆಗಳು ತುಂಬಿಲ್ಲ” ಎಂದು ಹೇಳಿದರು.

ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ

ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.