Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿಪಕ್ಷದವರ ಟೀಕೆಗಳು ಸತ್ತು ಹೋದವು, ಕೆಲಸ ಉಳಿದುಕೊಂಡಿತು
(ರಾಜ್ಯ ) ಜಿಲ್ಲೆ

ಪ್ರತಿಪಕ್ಷದವರ ಟೀಕೆಗಳು ಸತ್ತು ಹೋದವು, ಕೆಲಸ ಉಳಿದುಕೊಂಡಿತು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತುಂಗಭದ್ರಾ ಅಣೆಕಟ್ಟು ಕ್ರಸ್ಟ್ಗೇಟ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು/ಕೊಪ್ಪಳ: “ತುಂಗಭದ್ರಾ ಅಣೆಕಟ್ಟು ಕ್ರಸ್ಟ್ ಗೇಟ್ ಅವಘಡ ವಿಚಾರವಾಗಿ ವಿರೊಧ ಪಕ್ಷಗಳು ಕೇವಲ ಟೀಕೆ ಮತ್ತು ರಾಜಕೀಯ ಮಾಡುತ್ತಿದ್ದವು. ಆದರೆ ನಮ್ಮ ಕೆಲಸಗಳು ಉಳಿದುಕೊಂಡಿತು, ಅವರ ಟೀಕೆಗಳು ಸತ್ತು ಹೋದವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಬೆಂಗಳೂರಿನ ಸದಾಶಿವ ನಗರದ ನಿವಾಸ ಹಾಗೂ ತದ ನಂತರ ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು “ನಮ್ಮ ತಂತ್ರಜ್ಞರು, ಅಧಿಕಾರಿಗಳು, ಇಂಜಿನಿಯರ್ ಗಳು, ಕಾರ್ಮಿಕರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಈ ಭಾಗದ ಶಾಸಕರು ಅವಘಡ ನಡೆದ ದಿನದಿಂದ ಒಂದು ರಾತ್ರಿಯೂ ನಿದ್ದೆ ಮಾಡದೆ ಕೆಲಸ ಮಾಡಿದ್ದಾರೆ. ದೇವರ, ಜನರ ಆಶೀರ್ವಾದದಿಂದ ಈ ಕೆಲಸ ನಡೆದಿದೆ. ನಮ್ಮ ರೈತರನ್ನು ನಾವು ಬದುಕಿಸಿದ್ದೇವೆ” ಎಂದರು.
ನವಲಿ ಅಣೆಕಟ್ಟಿನ ಬಗ್ಗೆ ಸರ್ಕಾರದ ಆಲೋಚನೆ
ತುಂಗಭದ್ರಾ ಅಣೆಕಟ್ಟಿನ ಆಯಸ್ಸು ಕಡಿಮೆಯಿದೆ ಎನ್ನುವ ಬಗ್ಗೆ ಕೇಳಿದಾಗ “ಯಾವ ಆಯಸ್ಸು ಕಡಿಮೆಯಿಲ್ಲ. ತುಂಗಭದ್ರಾ ಅಣೆಕಟ್ಟು ಕಟ್ಟುವಾಗಲೇ ಪ್ರತಿವರ್ಷ ಅರ್ಧ ಟಿಎಂಸಿಯಷ್ಟು ಹೂಳು ತುಂಬಿಕೊಳ್ಳುತ್ತದೆ ಎನ್ನುವ ವರದಿಯಿತ್ತು ಎಂದು ಎಂ.ಬಿ.ಪಾಟೀಲರು ಮೊದಲೇ ಹೇಳಿದ್ದರು. ಮುಂದಿನ ದಿನಗಳಲ್ಲಿ ಪ್ರವಾಸ ನಡೆಸಿ ನವಲಿ ಸಮತೋಲಿತ ಅಣೆಕಟ್ಟಿನ ವಿಚಾರವಾಗಿ ಕೆಲಸ ಮಾಡಲಾಗುವುದು. ಇದರ ಪ್ರಸ್ತಾಪವನ್ನು ಈಗಾಗಲೇ ಬಜೆಟ್ ಅಲ್ಲಿ ಸೇರಿಸಲಾಗಿದೆ” ಎಂದು ತಿಳಿಸಿದರು.
ಕ್ರಸ್ಟ್ ಗೇಟ್ ಗಳನ್ನು 45 ವರ್ಷಗಳಿಗೊಮ್ಮೆ ಬದಲಾಯಿಸಬೇಕು ಎನ್ನುವ ವರದಿಯಿದ್ದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದಾಗ “ನಾನು ತಂತ್ರಜ್ಞನಲ್ಲ. ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ. ಅವರ ವರದಿಯ ಮೇಲೆ ಯಾವ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಆ ಕೆಲಸಗಳನ್ನು ಸರ್ಕಾರ ಮಾಡಲಿದೆ”ಎಂದು ತಿಳಿಸಿದರು.
ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ
“ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತೇವೆ. ಕೊಪ್ಪಳಕ್ಕೆ ವಿಮಾನ ಮಾರ್ಗದಲ್ಲಿ ಬರುವಾಗ ವೀಕ್ಷಣೆ ಮಾಡಿದೆವು. ಅಣೆಕಟ್ಟು ಶೀಘ್ರ ತುಂಬಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ನಾರಾಯಣ ಎಂಜಿನಿಯರಿಂಗ್, ಜಿಂದಾಲ್ ಮತ್ತು ಹಿಂದೂಸ್ಥಾನ್ ಇಂಜಿನಿಯರಿಂಗ್ ಈ ಮೂರು ಕಂಪೆನಿಗಳು ಮಾಡಿದ ಸಹಾಯದಿಂದ ಕೇವಲ ನಾಲ್ಕು ದಿನಗಳಲ್ಲಿ ಗೇಟ್ ದುರಸ್ತಿ ಮಾಡಲಾಯಿತು. ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಈ ಕೆಲಸವನ್ನು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ” ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಾರುತೇಶ್ವರ ಜಾತ್ರೆ: ಸಂಭ್ರಮದ ಹಾಲೋಕುಳಿಗೆ ಅದ್ಧೂರಿ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.