Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕಲೆ ರೂಪಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕಲೆ ರೂಪಿಸಿಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ

ವಿಜಯಪುರ: ನಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್, ಇ.ಎಲ್.ಸಿ ಹಾಗೂ ರೆಡ್‌ಕ್ರಾಸ್ ಚಟುವಟಿಕೆಗಳ ಸಮಾರೋಪ ಹಾಗೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುವ ಸಮಾರಂಭ ಆ.೨೧ರಂದು ಜರುಗಿತು.
ಸದರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳು ಬರಿ ಪದವಿ ಪಡೆಯುವುದು ಮುಖ್ಯವಲ್ಲ. ಅದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕಲೆಯನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರತಿನಿತ್ಯ ಒಂದಾದರೂ ದಿನ ಪತ್ರಿಕೆಯನ್ನು ಓದಬೇಕು ಎಂದು ತಿಳಿಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಡಾ. ಆರ್.ಎಸ್. ಕಲ್ಲೂರಮಠ ಮಾತನಾಡಿ, ವಿದ್ಯಾರ್ಥಿನಿಯರು ನಿಯಮಿತವಾಗಿ ಕಾಲೇಜಿಗೆ ಬರಬೇಕು. ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಅತಿಥಿಗಳಾಗಿ ಭಾಗವಹಿಸಿದ ವಿಶ್ರಾಂತ ಪ್ರಾಧ್ಯಾಪಕ ಎಸ್.ಪಿ. ಬೀಡಗೊಂಡ ಮಾತನಾಡುತ್ತ ವಿದ್ಯಾರ್ಥಿನಿಯರು ಚೆನ್ನಾಗಿ ಅಧ್ಯಯನಗೈದು ಕಾಲೇಜು ಹಾಗೂ ತಮ್ಮ ಮನೆಗೆ ಕೀರ್ತಿ ತರುವಂತಹ ಕಾರ್ಯಮಾಡಬೇಕೆಂದು ಹೇಳಿದರು. ಕಲಾ ವಿಭಾಗದಿಂದ ಮಾಲಾ ನಡುವಿನಕೇರಿ, ವಿಜ್ಞಾನ ವಿಭಾಗದಿಂದ ಶಾಂಭವಿ ಹಾಗೂ ವಾಣಿಜ್ಯ ವಿಭಾಗದಿಂದ ಆಲಿಯಾ ಮುಲ್ಲಾ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಪ್ರಾರಂಭದಲ್ಲಿ ಕುಮಾರಿ ಮಹೇಶ್ವರಿ ಪ್ರಾರ್ಥನೆ ಸಲ್ಲಿಸಿದರು. ಡಾ. ಚಿದಾನಂದ ಎಸ್. ಆನೂರ ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಪ್ರೊ. ಪಿ.ಬಿ. ಬಿರಾದಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಲಕ್ಷ್ಮೀ ಮೋರೆ ವಾರ್ಷಿಕ ವರದಿ ವಾಚಿಸಿದರು. ಡಾ. ರಾಜಶೇಖರ ಬೆನಕನಹಳ್ಳಿ ಅವರು ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.
ವೇದಿಕೆಯಲ್ಲಿ ಪ್ರೊ. ರಮೇಶ ಬಳ್ಳೊಳ್ಳಿ, ಪ್ರೊ. ಮಾರುತಿ ಜೋಶಿ ಉಪಸ್ಥಿತರಿದ್ದರು. ಡಾ. ಆನಂದ ಕುಲಕರ್ಣಿ ವಂದಿಸಿದರು. ಡಾ. ಭಾರತಿ ಹೊಸಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಡಾ. ನೀಲಕಂಠ ಹಳ್ಳಿ, ಡಾ. ದಾವಲಸಾ ಪಿಂಜಾರ, ಡಾ. ಎಂ.ಆರ್. ಕೆಂಭಾವಿ, ಡಾ. ರಾಮಣ್ಣ ಕಳ್ಳಿ, ಡಾ. ರಮೇಶ ಕುಮಟಗಿ, ಪ್ರೊ. ನಾತುರಾಮ ಜಾಧವ, ಪ್ರೊ. ತೌಸಿಫ ಗೊಡೆಸವಾರ, ಪ್ರೊ. ಮಂಜುನಾಥ ಗಾಣಿಗೇರ, ಪ್ರೊ. ಆಸೀಫ ರೋಜಿನದಾರ, ಪ್ರೊ. ಶೋಭಾ ರುದ್ರಗೌಡರ, ಪ್ರೊ. ರಶ್ಮಿ ಹೊನಕೇರಿ, ಡಾ. ಬೋರಮ್ಮ ಗಂಜ್ಯಾಳ, ಡಾ. ಸವಿತಾ ಚವ್ಹಾಣ, ಡಾ. ಎಸ್. ಎಂ. ಕಿತ್ತೂರ, ಡಾ. ರಾಜೇಶ್ವರಿ ಪುರಾಣಿಕ, ಪ್ರೊ. ಸದಾಶಿವ ಚಲವಾದಿ, ಡಾ. ರಾಘವೇಂದ್ರ ಗುರ್ಜಾಲ, ಡಾ. ಫೈರೋಜ ಪಠಾಣ, ಪ್ರೊ. ಅಸಾದುಲ್ಲಾ, ಶಿವಾನಂದ ಸಾಂಗೊಲಿ, ವೀರನಗೌಡ ಪಾಟೀಲ, ನವೀನಗೌಡ ಬಿರಾದಾರ, ಸುಜಾತಾ ಬಿರಾದಾರ, ಎಚ್.ಎಂ. ಉಕ್ಕಲಿ, ಡಾ. ಸವಿತಾ ಪಾಟೀಲ, ಪ್ರೊ. ನಿಲೋಫರ ಕಲಾದಗಿ, ಪ್ರೊ. ರಶ್ಮಿ ರೊಟ್ಟಿ, ಪ್ರೊ. ಶೃತಿ ಕದಮ ಹಾಗೂ ಕಾಲೇಜಿನ ಇತರ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಮನೋರಂಜನೆ ಕಾರ್ಯಕ್ರಮ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.