Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಲನಂದೀಶ್ವರ ಜಾತ್ರಾಮಹೋತ್ಸವಕ್ಕೆ ಮಂಡಳಿಯಿಂದ ಸಂಪೂರ್ಣ ಸಹಕಾರ
(ರಾಜ್ಯ ) ಜಿಲ್ಲೆ

ಮೂಲನಂದೀಶ್ವರ ಜಾತ್ರಾಮಹೋತ್ಸವಕ್ಕೆ ಮಂಡಳಿಯಿಂದ ಸಂಪೂರ್ಣ ಸಹಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವ ಆಗಷ್ಟ್ ೨೬ ರಿಂದ ಐದು ದಿನಗಳ ಕಾಲ ಜರುಗಲಿದ್ದು. ಜಾತ್ರೆಗೆ ಬರುವ ಭಕ್ತ ಸಮೂಹಕ್ಕೆ ಐದು ದಿನಗಳ ಕಾಲ ನಿರಂತರ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ದಾಸೋಹವನ್ನು ದೇವಸ್ಥಾನದ ಹತ್ತಿರವಿರುವ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಬಸಪ್ಪ ಪೂಜಾರಿ ಹೇಳಿದರು.
ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಾತ್ರೆಯಂಗವಾಗಿ ದಾಸೋಹದ ಅಡುಗೆ ತಯಾರಿಸಲು ತಾತ್ಕಲಿಕವಾಗಿ ಹಾಕಲಾಗುತ್ತಿರುವ ಶೆಡ್ ಅನ್ನು ಬುಧವಾರ ಸಂಜೆ ವೀಕ್ಷಿಸಿ ಮಾತನಾಡಿದ ಅವರು, ಈಗಾಗಲೇ ಜಾತ್ರೆಗೆ ಬೇಕಾದ ಅಗತ್ಯ ಸಿದ್ಧತೆ ಭರದಿಂದ ಸಾಗಿದೆ. ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿನಿತ್ಯ ದಾಸೋಹ ವ್ಯವಸ್ಥೆ ಇರುತ್ತದೆ. ಜಾತ್ರೆಗೆ ಅಪಾರ ಪ್ರಮಾಣದ ಭಕ್ತರು ಬರುವದರಿಂದಾಗಿ ಅಲ್ಲಿ ಜಾಗೆ ವಿಶಾಲವಾಗಿಲ್ಲದೇ ಇರುವದರಿಂದಾಗಿ ಪ್ರತಿ ವರ್ಷ ಜಾತ್ರೆಯ ದಾಸೋಹದ ವ್ಯವಸ್ಥೆಯನ್ನು ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಂಡಳಿಯಿಂದ ವ್ಯವಸ್ಥೆ ಮಾಡಲಾಗುತ್ತದೆ. ದಾಸೋಹವನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಮಂಡಳಿಯ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಇದಕ್ಕೆ ಅಗತ್ಯ ಸಿದ್ಧತೆಯ ಬಗ್ಗೆ ಇಂದು ಸಂಬಂಧಿಸಿದವರ ಸಭೆ ಕರೆದು ಅವರಿಗೆ ತಿಳಿಸಲಾಗಿದೆ. ಜಾತ್ರೆಯಂಗವಾಗಿ ದೇವಸ್ಥಾನ, ದೇವಸ್ಥಾನದ ದ್ವಾರಬಾಗಿಲುಗಳಿಗೆ ಅಲಂಕಾರಿಕ ವಿದ್ಯುದೀಪ ವ್ಯವಸ್ಥೆ ಮಾಡಲಾಗುತ್ತಿದೆ. ದೇವಸ್ಥಾನದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಎಲ್ಲ ಶಿಕ್ಷಕರು ಸಹ ದೇವಸ್ಥಾನಕ್ಕೆ ಸಂಬಂಧಿಸಿದ ರುದ್ರಾಭಿಷೇಕ ಪಾವತಿ ಕೇಂದ್ರದಲ್ಲಿ, ದಾಸೋಹ ಕೇಂದ್ರದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಎರಡೂ ಶಾಲೆಗಳ ಶಿಕ್ಷಕರ ಸಭೆ ಕರೆದು ಇದರ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.
ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವವು ಪ್ರತಿ ವರ್ಷ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಹಾಗೂ ಜಾತ್ರಾ ಉತ್ಸವ ಸಮಿತಿ ಸೇರಿದಂತೆ ಪಟ್ಟಣದ ಹಿರಿಯರ ಮಾರ್ಗದರ್ಶನದಲ್ಲಿ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ವರ್ಷದ ಜಾತ್ರೆಯು ಅದ್ದೂರಿಯಾಗಿ ನಡೆಯಲಿದೆ. ಜಾತ್ರೆಯಲ್ಲಿ ಸಂಪ್ರದಾಯದಂತೆ ನಡೆಯುವ ಪಲ್ಲಕ್ಕಿ ಉತ್ಸವ, ದಾಸೋಹ ಸೇರಿದಂತೆ ವಿವಿಧ ಕಾರ್ಯಗಳಿಗೆ ಮಂಡಳಿಯಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಮಂಡಳಿಯ ತಹಸೀಲ್ದಾರ ಜೆ.ಎಸ್.ಚಿನಿವಾಲರ, ಲೆಕ್ಕ ಅಧಿಕ್ಷಕ ಬಸವರಾಜ ಕಳ್ಳಿ, ಸುರೇಶ ಪಡಶೆಟ್ಟಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.