ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ sಸಲಹೆ ಸೂಚನೆಗಳನ್ನು ನೀಡಿದರು.
ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.
ಪಾಠ ಮಾಡಿ ಮಕ್ಕಳಿಗೆ ಪ್ರೇರಣೆಯಾದ ಡಿಸಿ ಹಾಗೂ ಸಿಇಒ : ಈ ಸಂದರ್ಭದಲ್ಲಿ ೧೦ನೇ ತರಗತಿಯ ಕೊಠಡಿಗೆ ತೆರಳಿ ವಿದ್ಯಾರ್ಥಿ ಗಳಿಗೆ ಭೂಗೋಳ, ಗಣಿತ,ಸಮಾಜ ವಿಜ್ಞಾನ ಸೇರಿದಂತೆ ಸಾಮಾನ್ಯ ಜ್ಞಾನದ ವಿಷಯದ ಬಗ್ಗೆ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ರೇಖಾಗಣಿತ ಹಾಗೂ ಇಂಗ್ಲೀಷ ವ್ಯಾಕರಣದ ಕುರಿತು ತಿಳಿಸಿಕೊಟ್ಟರು.
ವಿದ್ಯಾರ್ಥಿ ಜೀವನವನ್ನು ಸುಂದರವಾಗಿಸಿಕೊಳ್ಳಿ, ಜ್ಞಾನಾರ್ಜನೆ ಪಡೆದುಕೊಳ್ಳಲು ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು. ಪ್ರತಿನಿತ್ಯದ ಪಾಠಗಳನ್ನು ಶ್ರವಣ ಮಾಡುವ ಮೂಲಕ ಮನನ ಮಾಡಿಕೊಳ್ಳಬೇಕು. ಜೀವನ ಸುಂದರಗೊಳಿಸಿಕೊಂಡು ಕಲಿತ ಶಾಲೆ ತಮ್ಮ ಊರಿಗೆ ಕೀರ್ತಿ ತರಬೇಕು.ಪಾಠದೊಂದಿಗೆ ಆಟೋಟಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿದ್ಯಾಲಯದ ಪ್ರಾಂಶುಪಾಲರು ಸೇರಿದಂತೆ ಇತರ ಅಧಿಕಾರಿಗಳು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

