ವಿಜಯಪುರ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಸಂಸ್ಥೆಗಳು ಆಯೋಜಿಸುವ ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ನಮೂನೆಯನ್ನು ಪಡೆದು, ದಿನಾಂಕ : ೧೮-೦೯-೨೦೨೪ರೊಳಗಾಗಿ ಭರ್ತಿ ಮಾಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫,ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
