ದೇವರಹಿಪ್ಪರಗಿ: ಸಾಮಾಜಿಕ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ “ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ” ಜರುಗಿತು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಎಂ.ವೈ.ಮಲಕ್ಕನ್ನವರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿಯೊಬ್ಬ ನಾಗರಿಕ ಕೂಡ ತನ್ನ ತಾಯಿ ಹೆಸರಿನಲ್ಲಿ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸಿ, ಬೆಳೆಸುವ ಕಾರ್ಯ ಮಾಡಬೇಕು. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಅರಣ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ಅರಿತುಕೊಳ್ಳುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪವಲಯ ಅರಣ್ಯ ಅಧಿಕಾರಿ ಆರ್.ಎಚ್.ಬಿರಾದಾರ, ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಜಿ.ಎಸ್.ರೋಡಗಿ, ಕಿರಣ ಪಾಟೀಲ, ಆನಂದ ಮುದೋಡಗಿ, ಪರಶುರಾಮ ಗುಬ್ಬೇವಾಡ, ಭೀಮರಾಯ ಭಾವಿಕಟ್ಟಿ, ಭಾರತಿ ಕೋಳಿ, ಭಾರತಿ ಸೇರಿದಂತೆ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

