Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಸಿದ್ದರಾಮಯ್ಯನವರ ಅಸಲಿ ಮುಖ ಹೊರಬಿದ್ದಿದೆ
(ರಾಜ್ಯ ) ಜಿಲ್ಲೆ

ಸಿಎಂ ಸಿದ್ದರಾಮಯ್ಯನವರ ಅಸಲಿ ಮುಖ ಹೊರಬಿದ್ದಿದೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ವಿಜಯಪುರ: ಸಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ವರ್ತನೆ ಖಂಡಿಸಿ, ವಾಲ್ಮೀಕಿ ಹಗರಣ, ಮುಡಾ ಹಗರಣದ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ವಿರೋಧಿಸಿ ಹಾಗೂ ಕಾರಣಿಕರ್ತರಾದ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ದಲಿತ ರಾಜ್ಯಪಾಲರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು, ಮುಖಂಡರು ಮನಸ್ಸಿಗೆ ಬಂದಂತೆ ಅವಹೇಳನಕಾರಿಯಾಗಿ ಹಾಗೂ ಏಕವಚನ ಪ್ರಯೋಗ ಮಾಡುವ ಮೂಲಕ ಸಂವಿಧಾನ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರನ್ನು ನಿಂದಿಸಿರುವುದು ಖಂಡನೀಯ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಎದುರಲ್ಲೇ ಈ ರೀತಿಯ ಹೀನ ವರ್ತನೆ ನಡೆದರೂ, ಅವರ ವಿರುದ್ಧ ಕ್ರಮಗೊಂಡಿಲ್ಲ. ಇದರಿಂದ ತಿಳಿಯುತ್ತದೆ ನಿಜವಾದ ದಲಿತ ವಿರೋಧಿಗಳು, ಸಂವಿಧಾನ ವಿರೋಧಿಗಳು ಯಾರು ಎನ್ನುವುದು. ಕೂಡಲೇ ಅವಮಾನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಾಲ್ಮೀಕಿ ಹಗರಣದಲ್ಲಿ ಅವ್ಯವಹಾರ ಆಗಿರುವುದು ನಿಜವೆಂದು ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಗಳ ಕುಟುಂಬವೇ ಸಿಲುಕಿರುವುದು ದಾಖಲೆಗಳಿಂದ ಸ್ಪಷ್ಟವಾಗಿದೆ. ಈ ಮೂಲಕ ಸಿದ್ದರಾಮಯ್ಯನವರ ಅಸಲಿ ಮುಖ ಹೊರ ಬಂದಿದೆ. ಹೀಗಾಗಿ ಕೂಡಲೇ ರಾಜೀನಾಮೆ ನೀಡಿ, ತನಿಖೆಗೆ ಸಹಕಾರ ನೀಡಬೇಕು. ರಾಜ್ಯಪಾಲರಿಗೆ ಗೌರವ ನೀಡುವ ಪದ್ಧತಿ ಬೆಳೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ವಿಜುಗೌಡ ಪಾಟೀಲ, ಎಸ್.ಕೆ.ಬೆಳ್ಳುಬ್ಬಿ ಮಾತನಾಡಿದರು.
ಮುಖಂಡರಾದ ರಮೇಶ ಭೂಸನೂರ, ಅರುಣ ಶಹಾಪುರ, ಈರಣ್ಣ ಪಟ್ಟಣಶೆಟ್ಟಿ, ಪ್ರಭುಗೌಡ ಅಸ್ಕೆ,ಅನಿಲ್ ಜಮಾದಾರ್ ಸಿದ್ದು ಬುಳ್ಳಾ, ಮಂಜುನಾಥ್ ಮೀಸೆ, ಗುರುಲಿಂಗಪ್ಪ ಅಂಗಡಿ, ಮಲ್ಲಿಕಾರ್ಜುನ್ ಪಟ್ಟಣಶೆಟ್ಟಿ , ಉಮೇಶ್ ಕೊಲ್ಕರ್, ಕಾಸುಗೌಡ ಬಿರಾದಾರ, ಸಂಜು ಐಹೊಳಿ, ಮಳುಗೌಡ ಬಿರಾದಾರ, ಮಹೇಂದ್ರ ನಾಯಕ, ಶಂಕರ ಹೂಗಾರ, ಎಂ.ಎಸ್.ಕರಡಿ, ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ವಿಠ್ಠಲ ಹೊಸಪೇಟ, ಸ್ವಪ್ನಾ ಕಣಮುಚನಾಳ, ಕುಮಾರ ಗಡಗಿ, ಮಹೇಶ ಒಡೆಯರ, ವಿಕ್ರಮ ಗಾಯಕವಾಡ, ವಿಜಯ ಜೋಶಿ, ಮಡಿವಾಳ ಯಾಳವಾರ, ಅಶೋಕ ಬೆಲ್ಲದ, ದತ್ತಾ ಗೊಲಂಡೆ, ಲಕ್ಷ್ಮಣ ಜಾಧವ, ಪಾಂಡು ಸಾಹುಕಾರ ದೊಡಮನಿ, ರಾಹುಲ ಜಾಧವ, ಬಾಬು ಶಿರಶ್ಯಾಡ, ಲಕ್ಷ್ಮೀ ಕನ್ನೊಳ್ಳಿ, ಚಂದ್ರು ಚೌದರಿ, ಬಸ್ ಹೂಗಾರ್, ಮಲ್ಲಿಕಾರ್ಜುನ್ ಕಿವ್ಡಿ, ಸಂತೋಷ್ ಪಾಟೀಲ್, ಸಂಜೆ ಪಾಟೀಲ್ ಕನಮಡಿ, ಕೃಷ್ಣ ಗುನಾಲ್ಕರ್ ರಾಜೇಶ್ ತೋಸೆ ಕಾಂತು ಸಿಂಧೆ ಸೇರಿದಂತೆ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.