ಬಸವನಬಾಗೇವಾಡಿ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಪ್ರತಿಭಾ ಕಾರಂಜಿ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ. ಈ ಕಾರ್ಯಕ್ರಮದ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ತಾಲೂಕು, ಜಿಲ್ಲಾ, ರಾಜ್ಯ ಮಟ್ಟಕ್ಕೆ ಹೋಗುವಂತೆ ನಿರ್ಣಾಯಕರು ತಮ್ಮ ನಿರ್ಣಯ ನೀಡಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು.
ತಾಲೂಕಿನ ಅಂಬಳೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ, ಕ್ಷೇತ್ರಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಾಧಿಕಾರಿಗಳ ಕಾರ್ಯಾಲಯ ಮತ್ತು ನರಸಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನರಸಲಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಲು ಶಿಕ್ಷಕ ಬಾಂಧವರು, ಪಾಲಕರು ಸೂಕ್ತ ಅವಕಾಶ,ಪ್ರೇರಣೆ ನೀಡುವದು ಅಗತ್ಯವಿದೆ ಎಂದ ಅವರು, ಸರ್ಕಾರ ಶಿಕ್ಷಣಕ್ಕೆ ಬಹಳ ಒತ್ತು ನೀಡುತ್ತಿದೆ.ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ,ಶೂ-ಸಾಕ್ಸ್, ಬಟ್ಟೆ , ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಸದುಪಯೋಗವಾಗುವ ಮೂಲಕ ಉತ್ತಮ ಶಿಕ್ಷಣ ಮಕ್ಕಳಿಗೆ ಸಿಗುವಂತಾಗಬೇಕೆಂದರು.
ಅಧ್ಯಕ್ಷತೆಯನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸಿದ್ರಾಮಪ್ಪ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ.ನಾಗಾವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸೊಸಾಯಿಟಿ ನಿರ್ದೇಶಕ ಎಚ್.ಬಿ.ಬಾರಿಕಾಯಿ, ಸಿದ್ದಪ್ಪ ಅವಜಿ, ಬಾಲಪ್ಪಗೌಡ ಹೊಸಳ್ಳಿ,ಸಂಜೀವಪ್ಪಗೌಡ ಪಾಟೀಲ, ಶೇಖರಗೌಡ ಬಿರಾದಾರ, ಬಿ.ವ್ಹಿ.ಚಕ್ರಮನಿ, ಪಿ.ಎಸ್.ಬಾಗೇವಾಡಿ ಇತರರು ಇದ್ದರು. ಸಿಆರ್ಪಿ ಎಸ್.ಬಿ.ದಳವಾಯಿ ಪ್ರಾಸ್ತವಿಕವಾಗಿ ಮಾತನಾಡಿದರು. ಡಿ.ಆರ್.ಮಂಟ್ಯಾಳ ಪ್ರತಿಭಾ ಕಾರಂಜಿ ಕುರಿತಾದ ಕವನ ವಾಚಿಸಿದರು. ಆರ್.ಆರ್.ದಾಸರ ಸ್ವಾಗತಿಸಿದರು. ಎಚ್.ಎಂ.ಹೊಸಮನಿ ನಿರೂಪಿಸಿದರು. ಅರವಿಂದ ಸಜ್ಜನ ವಂದಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ ಕುಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ಸಿದ್ದು ಬಾಗೇವಾಡಿ ಅವರನ್ನು ಸನ್ಮಾನಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

