Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಉರಿಯ ಗದ್ದುಗೆ’ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ
(ರಾಜ್ಯ ) ಜಿಲ್ಲೆ

‘ಉರಿಯ ಗದ್ದುಗೆ’ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲಾವಣಿಗಳ ಮೂಲಕ ಪ್ರಖ್ಯಾತರಾಗಿರುವ ಈ ನಾಡಿನ ಹೆಸರಾಂತ ಲೇಖಕ ಬಿ.ಆರ್.ಪೊಲೀಸ್ ಪಾಟೀಲ ಅವರು ಬರೆದ ಗದುಗಿನ ತೋಂಟದಾರ್ಯ ಮಠದ ಹಿಂದಿನ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಜೀವನಾಧಾರಿತ ಕಾದಂಬರಿ ‘ಉರಿಯ ಗದ್ದುಗೆ’ ಎರಡನೇ ಆವೃತ್ತಿಯ ಲೋಕಾರ್ಪಣೆ ಸಮಾರಂಭ ಗುರುವಾರ ಸಂಜೆ ಇಲ್ಲಿನ ಮನಗೂಳಿ ರಸ್ತೆಯ ಗುರುಪಾದೇಶ್ವರ ನಗರ( ಇಬ್ರಾಹಿಂಪುರ ಪಕ್ಕದ ಬಡಾವಣೆ) ದ ತೋಂಟದಾರ್ಯ ಅನುಭವ ಮಂಟಪದಲ್ಲಿ ಜರುಗಿತು.
ಶ್ರಾವಣ ಮಾಸದ ಪ್ರಯುಕ್ತ ತೋಂಟದಾರ್ಯ ಅನುಭವ ಮಂಟಪದಲ್ಲಿ ಕವಿ ಚಾಮರಸ ವಿರಚಿತ ಪ್ರಭುಲಿಂಗ ಲೀಲೆ ಪ್ರವಚನ ಹೇಳುತ್ತಿರುವ ಖ್ಯಾತ ಪ್ರವಚನಕಾರರು, ಶ್ರೇಷ್ಠ ಅನುಭಾವಿಗಳಾದ ಅಥಣಿ ತಾಲೂಕಿನ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಸ್ವಾಮಿಗಳು ಉರಿಯ ಗದ್ದುಗೆ ಎರಡನೇ ಆವೃತ್ತಿಯ ಪುಸ್ತಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಮಹಾತ್ಮರ ಜೀವನಚರಿತ್ರೆಯ ಪುಸ್ತಕಗಳನ್ನು ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಹೆಸರಾಂತ ಲೇಖಕರಾದ ಬಿ.ಆರ್. ಪೊಲೀಸ್ ಪಾಟೀಲ ಅವರು ಬೆಳಗಾವಿ ನಾಗನೂರ ಮಠದ ಶಿವಬಸವ ಸ್ವಾಮಿಗಳ ಜೀವನಾಧಾರಿತ ‘ಮಹಾವೃಕ್ಷ’ ಕಾದಂಬರಿ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿ ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಅವರೇ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಜೀವನಚರಿತ್ರೆ ಕುರಿತಾದ ‘ಉರಿಯ ಗದ್ದುಗೆ’ ಕಾದಂಬರಿಯನ್ನು ಕೇವಲ ಒಂದು ತಿಂಗಳಲ್ಲಿ ಬರೆದಿದ್ದಾರೆ. ಪುಸ್ತಕ ಬಹಳ ಸುಂದರವಾಗಿ ಮೂಡಿದೆ. ಎಲ್ಲರೂ ಈ ಪುಸ್ತಕವನ್ನು ಕೊಂಡು ಓದಬೇಕು ಎಂದರು.
ಲೇಖಕ ಬಿ.ಅರ್.ಪೊಲೀಸ್ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಉರಿಯ ಗದ್ದುಗೆ ಪುಸ್ತಕ ಲೋಕಾರ್ಪಣೆಯಾದ ಕೆಲವೇ ತಿಂಗಳಲ್ಲಿ ಈ ಪುಸ್ತಕ ಮರುಮುದ್ರಣಗೊಂಡಿರುವುದು ತುಂಬಾ ಖುಷಿ ಎನಿಸಿದೆ. ಓದುಗರಿಂದ ಬಹಳಷ್ಟು ಬೇಡಿಕೆ ಬಂದಿದೆ ಎಂದು ಹೇಳಿ ಕಾದಂಬರಿಗೆ ಉರಿಯ ಗದ್ದುಗೆ ಎಂದು ಏಕೆ ಹೆಸರಿಡಲಾಯಿತು ಎಂಬುದರ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಯಾವುದೇ ಶುಭ ಸಮಾರಂಭಗಳಲ್ಲಿ ಹಣದ ರೂಪದಲ್ಲಿ ನಾವು ಇನ್ನೊಬ್ಬರಿಗೆ ಆಯರಿ ಮಾಡುವ ಬದಲಾಗಿ ಒಳ್ಳೆಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಜನರಲ್ಲಿ ಪುಸ್ತಕ ಓದುವ ಆಸಕ್ತಿ ತಾನಾಗಿಯೇ ಬೆಳೆಯುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಜನತೆಗೆ ಮನವಿ ಮಾಡಿಕೊಂಡರು.
ಡಾ. ಮಹಾಂತಪ್ರಭು ಸ್ವಾಮಿಗಳ ವಿದ್ಯಾಗುರುಗಳಾದ ಬೆಳಗಾವಿಯ ನಿವೃತ್ತ ಪ್ರಾಚಾರ್ಯ ಅಶೋಕ ಬೈಲವಾಡ, ಪಿಎಸ್ ಐ ಶಿವಾನಂದ ಆರೇನಾಡ ಸಾಹಿತಿಗಳಾದ ಮೋಹನ ಕಟ್ಟಿಮನಿ, ಶಂಕರ ಬೈಚಬಾಳ, ತೋಂಟದಾರ್ಯ ಅನುಭವ ಮಂಟಪದ ಕಾರ್ಯದರ್ಶಿ ಎನ್.ಕೆ.ಕುಂಬಾರ, ಹಾಗೂ ಆಡಳಿತ ಮಂಡಳಿಯ ಇತರ ಸದಸ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.