Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನಿನ ಸಂಪೂರ್ಣ ಅರಿವು ಹೊಂದಿ ನ್ಯಾಯ ದೊರಕಿಸಲು ಮುಂದಾಗಿS
(ರಾಜ್ಯ ) ಜಿಲ್ಲೆ

ಕಾನೂನಿನ ಸಂಪೂರ್ಣ ಅರಿವು ಹೊಂದಿ ನ್ಯಾಯ ದೊರಕಿಸಲು ಮುಂದಾಗಿS

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂವಾದ ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು

ವಿಜಯಪುರ: ದುರ್ಬಲರಿಗೆ, ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನಿಡುವ ಮೂಲಕ ಅವರಿಗೆ ನ್ಯಾಯ ದೊರಕಿಸುವ ಉತ್ಕೃಷ್ಟ ಜವಾಬ್ದಾರಿ ವಕೀಲರ ಮೇಲಿದ್ದು, ವಕೀಲರು ಕಾನೂನಿನ ಸಂಪೂರ್ಣ ಅರಿವು ಹೊಂದುವ ಮೂಲಕ ನ್ಯಾಯ ದೊರಕಿಸಲು ಮುಂದಾಗಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಕಿವಿ ಮಾತು ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹತ್ವದ ಕಾನೂನು ರಚನೆ ಹಾಗೂ ತಿದ್ದುಪಡಿಯಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ವಕೀಲರು ಸಮಾಜಕ್ಕೆ ಹತ್ತಿರವಿರುವ ಲೋಕಾಯುಕ್ತ ಕಾನೂನಿನ ಬಗ್ಗೆ ತಿಳಿದುಕೊಂಡು ಸಮಾಜಕ್ಕೆ ಎಲ್ಲರಿಗೂ ಸಹಾಯ ಮಾಡಲು ಅವಕಾಶವಿದೆ.ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವೂ ಇದಾಗಿದೆ. ಈ ನಿಟ್ಟಿನಲ್ಲಿ ದುರ್ಬಲರಿಗೆ, ಕಾನೂನು ರಕ್ಷಣೆ ನಿಡುವ ಮೂಲಕ ಅವರ ಜೀವನ ಸಮೃದ್ಧಗೊಳಿಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ವಕೀಲರಿಗೆ ವಿಶೇಷವಾದ ಗೌರವವಿದೆ. ಜನರು ತಮಗೆ ಕಷ್ಟ ಬಂದಾಗ, ಅನ್ಯಾಯವಾದಾಗ ಮೊದಲಿಗೆ ಅವರು ನ್ಯಾಯಾಂಗ ಮೇಲೆ ನಂಬಿಕೆ, ಭರವಸೆಯನ್ನಿಟ್ಟು ವಕೀಲರತ್ತ ಧಾವಿಸುತ್ತಾರೆ. ಹಾಗಾಗಿ ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅತಿಮುಖ್ಯವಾಗಿದೆ. ಜನರ ಭರವಸೆಯಂತೆ ನಾವು ಅವರಿಗೆ ನ್ಯಾಯ ದೊರಕಿಸುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಜವಾಬ್ದಾರಿಯನ್ನಿರಿತು, ಕಾನೂನಿನ ಸಂಪೂರ್ಣ ಅರಿವು ಹಾಗೂ ಸಮಾಜಕ್ಕೆ ಅತಿ ಹತ್ತಿರವಾದ ಲೋಕಾಯುಕ್ತ ಕಾಯ್ದೆಯನ್ನು ಅರಿತುಕೊಂಡು ವಕೀಲರು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಪ್ರತಿಯೊಂದು ಪ್ರಕರಣಗಳಲ್ಲೂ ವಿಶಿಷ್ಟತೆ ಇರುತ್ತದೆ. ಇದನ್ನರಿತುಕೊಂಡು ಕಾನೂನುಬದ್ಧವಾಗಿ, ಕಾನೂನು ರಕ್ಷಣೆಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸಿ, ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಕರ್ತವ್ಯವನ್ನು ಸಾರ್ಥಕತೆಗೊಳಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶಿವಾಜಿ ನಲವಡೆ, ಹಿರಿಯ ಸಿವ್ಹಿಲ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಚಾಗಶೆಟ್ಟಿ ಸೇರಿದಂತೆ ವಿವಿಧ ವಕೀಲರು ಉಪಸ್ಥಿತರಿದ್ದರು. ವಕೀಲರಾದ ಆರ್.ಎಸ್.ನಂದಿ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.