Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಎಎಸ್ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ವೃಂದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆ.೨೬ರ ಮಂಗಳವಾರ ಕೆಎಎಸ್ ಪರಿಕ್ಷೆ ನಡೆಯಲಿದೆ. ಪ್ರತಿ ೪-೫ ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.
ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಪರೀಕ್ಷಾ ಶುರುವಾಗುವ ಅರ್ಧಗಂಟೆಯ ಮುಂಚೆ ಜಾಮರ್ ಆನ್ ಮಾಡುವುದು, ಪರೀಕ್ಷಾ ಮುಗಿದ ಅರ್ಧ ಗಂಟೆಯ ನಂತರ ಬಂದ್ ಮಾಡುವುದು. ಎಲ್ಲಾ ಸಿಸಿಟಿವಿ ಕ್ಯಾಮಾರಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರತಿ ಅಭ್ಯರ್ಥಿಯ ಮಧ್ಯೆ ೨ ಮೀಟರ್ ಅಂತರವಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಪರಿಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್‌ಚೇರ-ಇಳಿಜಾರು ಸೌಲಭ್ಯ ಒದಗಿಸಬೇಕು. ಹಿಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತೀನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚಿಸಿ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಪೊಲೀಸ್ ಅಧಿಕಾರಿಗಳಾದ ರವಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.