ವಿಜಯಪುರ: ೨೦೨೪-೨೫ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.೨೧ಕೊನೆಯ ದಿನವಾಗಿದೆ.
ಅರ್ಜಿಯನ್ನು ಹತ್ತಿರದ ಬಾಪೂಜಿ ಸೇವಾ ಕೇಂದ್ರ,ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ನಿರೀಕ್ಷಕರು,ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ,ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೩೫೨-೨೯೫೩೫೩ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
