ವಿಜಯಪುರ: ನಗರದ ಸೈನಿಕ ಶಾಲೆ ಪ್ರತಿಭಾವಂತ ವಿದ್ಯಾರ್ಥಿಗಳ ಕಣಜವಾಗಿದ್ದು ದೇಶ ಕಟ್ಟುವಲ್ಲಿ ಇಲ್ಲಿ ಓದಿರುವ ವಿದ್ಯಾರ್ಥಿಗಳ ಪಾತ್ರ ಅನನ್ಯವಾದದ್ದು, ಇಲ್ಲಿ ಓದಿರುವ ವಿದ್ಯಾರ್ಥಿಗಳು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸೈನಿಕ ಶಾಲೆಯ ಗೌರವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದಾರೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಶುಕ್ರವಾರ ಪ್ರತಿಷ್ಠಿತ ಸೈನಿಕ ಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು, .ಹಲವಾರು ಸಾಧಕರ ಸಾಧನೆಗಳನ್ನ ಮಕ್ಕಳಿಗೆ ವಿವರಿಸಿ ಹೇಳಿ ಅವರಲ್ಲಿ ಸ್ಪೂರ್ತಿ ತುಂಬಿದರು.
ಸೈನಿಕ ಶಾಲೆಗೆ ಆಗಮಿಸಿದ ಸಂಗಮೇಶ ಬಬಲೇಶ್ವರ ಅವರನ್ನು ಪ್ರಾಚಾರ್ಯರಾದ ಕ್ಯಾಪ್ಟನ್ ಪ್ರತಿಭಾ ಬಿಸ್ಟ್ ಹಾಗೂ ಸಿಬ್ಬಂದಿ ವರ್ಗ ಸ್ವಾಗತಿಸಿ ಸನ್ಮಾನಿಸಿದರು.
ಕರ್ನಾಟಕ ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಿದ ಸಂಗಮೇಶ ಬಬಲೇಶ್ವರ ವಿದ್ಯಾರ್ಥಿಗಳಿಗೆ ಶಿಸ್ತಿನ ಜೊತೆಗೆ ಸಂಸ್ಕಾರವನ್ನು ಕಲಿಸುವುದು ಇಂದಿನ ತುರ್ತು ಅಗತ್ಯವಾಗಿದೆ, ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಸೈನಿಕ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಕುರಿತು ಪ್ರಾಚಾರ್ಯರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

