ಯಡ್ರಾಮಿ: ಈ ಬಾರಿಯ ಗಣೇಶ ಚತುರ್ಥಿ ಆಚರಣೆಯಲ್ಲಿ ಮಣ್ಣಿನ ಗಣಪತಿ ಪ್ರತಿಷ್ಠಾಪಿಸಿ, ಆರೋಗ್ಯಯುತ ಪರಿಸರ ಕಟ್ಟಲು ಎಲ್ಲರೂ ಶ್ರಮಿಸಬೇಕು ಎಂದು ಯಡ್ರಾಮಿ ಪಪಂ ಮುಖ್ಯಾಧಿಕಾರಿ ಸಂತೋಷಕುಮಾರ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಡಗರದಿಂದ ಗಣೇಶ ಚತುರ್ಥಿ ಮಾಡುವುದಷ್ಟೇ ನಮ್ಮ ಆದ್ಯತೆ ಆಗದೇ, ರಾಸಾಯನಿಕ ಬಣ್ಣ ಲೇಪನವಿಲ್ಲದ ಮಣ್ಣಿನಿಂದ ತಯಾರಿಸಿದ ಗಣಪತಿ ಪ್ರತಿಷ್ಠಾಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಯಾವುದೇ ಕಾರಣಕ್ಕೂ ಪಿಓಪಿ ಯಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು ನಿಷೇಧಿಸಲಾಗಿದೆ. ಇಂತಹ ರಾಸಾಯನಿಕ ಬಣ್ಣದ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡುವಲ್ಲಿ ನಮ್ಮ ಪರಿಸರವನ್ನು ನಾವೇ ಹಾಳು ಮಾಡಿಕೊಂಡಂತೆ ಆಗುತ್ತದೆ. ಹೀಗಾಗಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದರ ಮೂಲಕ ಸ್ವಚ್ಛ ಪರಿಸರ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸೋಣ ಎಂದರು.
ಒಂದು ವೇಳೆ ರಾಸಾಯನಿಕ ಬಣ್ಣದ ಗಣಪತಿ ಪ್ರತಿಷ್ಠಾಪಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಮಣ್ಣಿನ ಗಣಪತಿ ಪ್ರತಿಷ್ಠಾಪಿಸಿ ಆರೋಗ್ಯಯುತ ಪರಿಸರ ಕಟ್ಟಿ :ಸಂತೋಷ ರೆಡ್ಡಿ
Related Posts
Add A Comment

