Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇವತಗಾಂವ: ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ
(ರಾಜ್ಯ ) ಜಿಲ್ಲೆ

ರೇವತಗಾಂವ: ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ೧೯೬೯ರಲ್ಲಿ ಸ್ಥಾಪನೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ(ಇಸ್ರೋ) ೫೫ ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ ಸಾಧನೆ ಮೆರೆದಿದೆ. ಹಲವು ಉಪಗ್ರಹಗಳ ಮೂಲಕ ಭಾರತದ ಅಭಿವೃದ್ಧಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಜತೆಗೆ ಬಾಹ್ಯಾಕಾಶ ಸಾಧನೆಗಳ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ ಎಂದು ರೇವತಗಾಂವ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಆರ್.ಎಚ್.ನದಾಫ್‌ರವರು ಹೇಳಿದರು.
ಶುಕ್ರವಾರದಂದು ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಬಾಹ್ಯಾಕಾಶ ದಿನ”ದ ಅಂಗವಾಗಿ ಮಾತನಾಡಿದ ಅವರು. ಭಾರತದ ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-೩ ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಅ.೨೩ ರಂದು ಚಂದ್ರಯಾನ-೩ ಮಿಷನ್ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು. ಈ ಸ್ಥಳಕ್ಕೆ ತಲುಪಿದ ಮೊದಲ ರಾಷ್ಟ್ರ ಭಾರತವಾಯಿತು. ಈ ಸಂಭ್ರಮವನ್ನು ಸದಾ ಸ್ಮರಣೀಯಗೊಳಿಸಲು ಭಾರತ ಸರಕಾರವು ಪ್ರಸಕ್ತ ವರ್ಷದಿಂದ ಅಗಸ್ಟ್ ೨೩ ರಂದು “ರಾಷ್ಟ್ರೀಯ ಬಾಹ್ಯಾಕಾಶ ದಿನ” ಎಂದು ಆಚರಿಸಲು ಮುಂದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಗುರುಮಾತೆಯವರಾದ ಎಂ.ಎಸ್.ಪಾಟೀಲರವರು ಮಾತನಾಡುತ್ತ. ಕಳೆದ ವರ್ಷ ಅಗಸ್ಟ್ ೨೩ ರಂದು ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-೩ ಯೋಜನೆ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿನ ‘ಶಿವ ಶಕ್ತ’ ಬಿಂದುವಿನಲ್ಲಿ ಇಳಿದ ಸಾಧನೆಯನ್ನು ಸ್ಮರಿಸಲು ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ಬಾಹ್ಯಾಕಾಶ ಅನ್ವೇಷಣೆಗೆ ಸಂಬಂಧಿಸಿದಂತೆ ಭಾರತದ ಮಹತ್ವದ ಸಾಧನೆಗಳನ್ನು ಸ್ಮರಿಸುವುದು, ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಆಧುನಿಕತೆಯನ್ನು ಪ್ರದರ್ಶಿಸುವುದು ಮತ್ತು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನದ ಕುರಿತು ಆಸಕ್ತಿ ಮೂಡಿಸುವುದು ಈ ಆಚರಣೆಯ ಉದ್ದೇಶವಾಗಿದೆ. ಅದರೊಡನೆ, ಸಾರ್ವಜನಿಕರಲ್ಲಿ ರಾಷ್ಟ್ರೀಯ ಹೆಮ್ಮೆ ಮತ್ತು ಐಕ್ಯತೆಯ ಭಾವವನ್ನು ಮೂಡಿಸಿ, ಅವರಲ್ಲಿ ಬಾಹ್ಯಾಕಾಶ ಅನ್ವೇಷಣೆಯ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಇದರ ಗುರುಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಂದ್ರಯಾನ-೩ ಹಾಗೂ ಬಾಹ್ಯಾಕಾಶದ ಚಿತ್ರಕಲೆ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಶಿಕ್ಷಕರುಗಳಾದ ಆರ್.ಎಂ.ಚೋಪಡೆ, ಎಂ.ಎನ್.ಹೋಕಳೆ, ಡಿ.ಜಿ.ಭಂಢರಕೋಟೆ, ಎಂ.ಸಿ.ಮಾಳಾಬಗಿ, ರಮೇಶ ತಳಕೇರಿ, ಪ್ರಶಾಂತ ಐಹೋಳ್ಳಿ, ಎಸ್.ಎ.ಕುಂಬಾರ, ಅಶ್ವಿನಿ ಹಾವಿನಾಳ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.