Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್
(ರಾಜ್ಯ ) ಜಿಲ್ಲೆ

ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭ |ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ, ಜನರ ತೆರಿಗೆ ಹಣವನ್ನು ಯಾವ ರೀತಿ ಲೂಟಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿ ಚರ್ಚೆ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಮ್ಯೂಸಿಕಲ್ ಚೇರ್ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ನಡುವೆ ಪೈಪೋಟಿ ನಡೆದಿದೆ. ಎಲ್ಲರೂ ದೆಹಲಿಗೆ ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಬಳಿಕ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು. ದೆಹಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ಮುಂಖಂಡರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮತ್ತು ಹಲವು ಹಿರಿಯ ಸಚಿವರು ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ನಂತರ ಬಿಜೆಪಿ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಈ ಸರ್ಕಾರವನ್ನು ಕಿತ್ತೊಗೆಯುತ್ತೇವೆ ಎಂದು ಎಂದಿಗೂ ಹೇಳಿಲ್ಲ, ನಾವು ಯಾವುದೇ ಶಾಸಕರನ್ನು ಸಂಪರ್ಕಿಸಿಲ್ಲ ಅಥವಾ ಭೇಟಿ ಮಾಡಿಲ್ಲ, ನಾವು ಯಾವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದೇವೆ? ನಾವು ಯಾರನ್ನು ಭೇಟಿ ಮಾಡಿದ್ದೇವೆ ಎಂಬ ಬಗ್ಗೆ ಅವರೇ ತಿಳಿಸಲಿ, ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಒಳಜಗಳಬಗ್ಗೆ ನಾನು ಪ್ರತಿದಿನ ಪತ್ರಿಕೆಗಳು ಮತ್ತು ದೂರದರ್ಶನ ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಅಲ್ಲಿ ಮ್ಯೂಸಿಕಲ್ ಚೇರ್ ನಡೆಯುತ್ತಿದೆ ಎಂದು ಅಶೋಕ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯಪಾಲರು ಅನುಮೋದನೆಗೆ ಕಳಿಸಿದ್ದ ಬಿಲ್ ಗಳನ್ನು ವಾಪಸ್ಸು ಮಾಡಿದ್ದಕ್ಕೆ ಸರ್ಕಾರದ ನಿರ್ಲಕ್ಷ್ಯತನ ಕಾರಣವೇ ಹೊರತು ಬೇರೆ ಯಾವುದೇ ಕಾರಣಕ್ಕಲ್ಲ ಎಂದರು. ಸರ್ಕಾರ ಬಿಲ್​ಗಳನ್ನು ಸರ್ಕಾರಕ್ಕೆ ಕಳಿಸಿದ ಬಳಿಕ ಸಾರ್ವಜನಿಕರು ಅವುಗಳ ಬಗ್ಗೆ ಆಕ್ಷೇಪಣೆ ಮತ್ತು ದೂರುಗಳನ್ನು ರಾಜ್ಯಪಾಲರಿಗೆ ಸಲ್ಲಿಸಿರುತ್ತ್ತಾರೆ. ಆ ಆಕ್ಷೇಪಣೆಗಳ ಆಧಾರದಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಸ್ಪಷ್ಟೀಕರಣಗಳನ್ನು ಕೇಳಿರುತ್ತಾರೆ. ಸರ್ಕಾರ ಮುಖ್ಯ ಕಾರ್ಯದರ್ಶಿ ಮತ್ತು ಬೇರೆ ಅಧಿಕಾರಿಗಳು ರಾಜ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮಾಹಿತಿ ನೀಡಿ ಗೊಂದಲಗಳನ್ನು ನಿವಾರಿಸಿದರೆ ಅವರು ಅನುಮೋದನೆ ನೀಡುತ್ತಾರೆ ಎಂದು ಅಶೋಕ ಹೇಳಿದರು.
ಸ್ಪಷ್ಟೀಕರಣ ಕೇಳುವುದು ರಾಜ್ಯಪಾಲರಿಗಿರುವ ಸಂವಿಧಾನದತ್ತ ಹಕ್ಕು ಮತ್ತು ಅಧಿಕಾರ. ಅದನ್ನು ಗೌರವಿಸುವುದನ್ನು ಬಿಟ್ಟು ಸರ್ಕಾರದ ಪ್ರತಿನಿಧಿಗಳು ರಾಜ್ಯಪಾಲರನ್ನು ಮನಬಂದಂತೆ ನಿಂದಿಸಿದ್ದಾರೆ. ಯಾರೋ ಜನಸಾಮಾನ್ಯ ನಿಂದಿಸಿದರೆ ಅದು ಬೇರೆಯಾಗಿರುತಿತ್ತು, ಅದರೆ ಮಂತ್ರಿಗಳು ದಲಿತ ಎಂದು ಏಕವಚನದಲ್ಲಿ ಹೀಯಾಳಿಸಿದ್ದಾರೆ. ಗೌರವಾನ್ವಿತ ರಾಜ್ಯಪಾಲರ ಪೋಟೋಗಳನ್ನು ಸುಟ್ಟಿದ್ದಾರೆ ಎಂದು ಅಶೋಕ ಹೇಳಿದರು. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯಪಾಲ ಎಚ್.ಎನ್ ಭಾರದ್ವಾಜ್ ಹಲವು ವಿದೇಯಕಗಳನ್ನು ವಾಪಸ್ ಕಳುಹಿಸಿದ್ದರು, ಆವಾಗ ನಾವು ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.