Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವೇಶ್ವರ ಜಾತ್ರೆಯ ದಾಸೋಹಕ್ಕೆ ಮಹಿಳೆಯರಿಂದ ರೊಟ್ಟಿ ಸೇವೆ
(ರಾಜ್ಯ ) ಜಿಲ್ಲೆ

ಬಸವೇಶ್ವರ ಜಾತ್ರೆಯ ದಾಸೋಹಕ್ಕೆ ಮಹಿಳೆಯರಿಂದ ರೊಟ್ಟಿ ಸೇವೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರೆಯ ದಾಸೋಹಕ್ಕೆ ಮಹಿಳೆಯರು ತಮ್ಮ ಮನೆಯಲ್ಲಿ ಮಾಡಿದ ರೊಟ್ಟಿಗಳನ್ನು ಬುಟ್ಟಿಯಲ್ಲಿ ಇಟ್ಟು ಜಿಟಿ ಜಿಟಿ ಮಳೆಯನ್ನು ಲೆಕ್ಕಿಸದೇ ಶನಿವಾರ ಸಂಜೆ ವಿರಕ್ತಮಠದಿಂದ ಮೆರವಣಿಗೆ ಮೂಲಕ ದೇವಸ್ಥಾನದ ದಾಸೋಹ ಭವನಕ್ಕೆ ತಲುಪಿಸಿದರು.
ಸ್ಥಳೀಯ ವಿರಕ್ತಮಠದಲ್ಲಿ ಬಸವಣ್ಣನವರ ಭಾವಚಿತ್ರ ಹಾಗೂ ರೊಟ್ಟಿಯ ಬುಟ್ಟಿಗಳಿಗೆ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮಹಿಳೆಯರು ರೊಟ್ಟಿಯ ಬುಟ್ಟಿಯನ್ನು ತಲೆಯಮೇಲೆ ಹೊತ್ತುಕೊಂಡು ಬಸವಜನ್ಮ ಸ್ಮಾರಕ, ಪಲ್ಲೇದ ಕಟ್ದೆ, ಅಗಸಿ, ಬಸವೇಶ್ವರ ವೃತ್ತದ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಿದರು.
ಪಟ್ಟಣದ ವಿವಿಧ ಗಲ್ಲಿಯ ಮಹಿಳೆಯರು ಮೂರು ಸಾವಿರಕ್ಕಿಂತ ಹೆಚ್ಚು ರೊಟ್ಟಿಗಳನ್ನು ಹಾಗೂ ತಾಳಿಕೋಟೆ ತಾಲೂಕಿನ ಹಗರಗುಂಡ ಎಲ್.ಟಿ ಯ ಸುರೇಶ ರಾಠೋಡ ಅವರು ಟ್ರ್ಯಾಕ್ಟರ ಮೂಲಕ ಎರಡು ಸಾವಿರ ರೊಟ್ಟಿಗಳನ್ನು ದಾಸೋಹ ಭವನಕ್ಕೆ ತಲುಪಿಸಿದರು.
ಜಾತ್ರೆಗೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಜಾತ್ರೆಯಲ್ಲಿ ನಿರಂತರವಾಗಿ ದಾಸೋಹ ನಡೆಯುತ್ತದೆ. ಪಟ್ಟಣದ ವಿವಿಧ ಬಡಾವಣೆಗಳ ಮಹಿಳೆಯರು ತಮ್ಮ ಮನೆಯಲ್ಲಿ ಮಾಡಿದ ರೊಟ್ಟಿಗಳನ್ನು ದಾಸೋಹಕ್ಕೆ ನೀಡುತ್ತಿರುವುದು ವಿಶೇಷ. ಇಂತಹ ಕಾರ್ಯಗಳು ಇತರರಿಗೆ ಮಾದರಿಯಾಗಲಿದೆ. ಜಾತ್ರೆಯ ಮೆರಗನ್ನು ಹೆಚ್ಚಿಸಲಿದೆ ಎಂದು ಶ್ರೀಗಳು ತಿಳಿಸಿದರು.
ಮೆರವಣಿಗೆಯಲ್ಲಿ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಗುರುಲಿಂಗ ಬಸರಕೋಡ, ಮುಖಂಡರಾದ ಬಸವರಾಜ ಹಾರಿವಾಳ, ಬಸವರಾಜ ಗೊಳಸಂಗಿ, ಅನಿಲ ಅಗರವಾಲ, ಶೇಖರ ಗೊಳಸಂಗಿ, ಎಂ.ಜಿ.ಆದಿಗೊಂಡ, ಸಂಗಮೇಶ ಓಲೇಕಾರ, ಬಾಬುಗೌಡ ಪಾಟೀಲ, ಶ್ರೀಕಾಂತ ಪಟ್ಡಣಶೆಟ್ಟಿ, ಎಸ್.ಎಸ್.ಝಳಕಿ, ಎಚ್.ಎಸ್.ಬಿರಾದಾರ, ರಾಯಣ್ಣ ಮಸಬಿನಾಳ, ಮಲ್ಲಿಕಾರ್ಜುನ ಪಡಶೆಟ್ಟಿ, ಚಂದ್ರಶೇಖರಗೌಡ ಪಾಟೀಲ, ಎಂ.ಬಿ.ತೋಟದ, ಪ್ರಭಾಕರ ಖೇಡದ, ಕೊಟ್ರೇಶಿ ಹೆಗ್ಡಾಳ, ಮಹಾದೇವಿ ಬಿರಾದಾರ, ಲಲಿತಾ ಗಬ್ಬೂರ, ಪುಷ್ಪಾ ಸಂಗಮ, ಮಹಾದೇವಿ ಪಡಶೆಟ್ಟಿ, ಶಾಂತಾಬಾಯಿ ಕುಂಬಾರ ಸೇರಿದಂತೆ ಇತರರು ಭಾಗವಹಿಸಿದ್ದರು. ರೊಟ್ಟಿ ಸೇವೆ ನೀಡಿದ ಮಹಿಳೆಯರಿಗೆ ದೇವಸ್ಥಾನದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.