Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೀರ್ತಿ ಪಡೆಯುವುದು ಸುಲಭವಲ್ಲ :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ಕೀರ್ತಿ ಪಡೆಯುವುದು ಸುಲಭವಲ್ಲ :ಶಾಸಕ ನಾಡಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಅಂತಸ್ತು, ಐಶ್ವರ್ಯ, ಆರೋಗ್ಯವನ್ನು ಎಲ್ಲರೂ ಪಡೆಯಬಹುದು ಆದರೆ ಕೀರ್ತಿ ಪಡೆಯುವದು ಅಷ್ಟೊಂದು ಸುಲಭವಲ್ಲ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸಾಧಕರಾದ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ವೀರಶೈವ ಮಹಾ ಸಭಾ ತಾಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ಮತ್ತು ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತ ಶರಣು ಸಜ್ಜನ ಈ ಮೂವರಿಗೆ ಸನ್ಮಾನಿಸಿ ಗೌರವಿಸಿ ಅವರು ಮಾತನಾಡಿದರು.
ಸಾಧಕರನ್ನು ಗುರುತಿಸುವ ಮತ್ತು ಸಾಧಕರ ಸಾಧನೆ ಇತರರಿಗೆ ಪ್ರೇರಣೆಯಾಗಲಿ ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸನ್ಮಾನಿತರಾದ ಈ ಮೂವರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನಮಗಿದೆ ಎಂದರು.
ನಮ್ಮಲ್ಲಿ ಯಾವುದೇ ಸಮಾಜಮುಖಿ ಕಾರ್ಯಕ್ರಮಗಳು ನಡೆದರೆ ಅಲ್ಲಿ ಜಾತಿ, ಮತ, ಪಂಥ, ಪಕ್ಷ ಎನ್ನದೇ ಎಲ್ಲರೂ ಮುಂಚೂಣಿಯಲ್ಲಿ ನಿಂತು ನಮ್ಮೂರಿಗೆ ಒಳ್ಳೆಯ ಹೆಸರು ಬರಲಿ ಎಂದು ಆ ಕಾರ್ಯಕ್ರಮವನ್ನು ರಾಜ್ಯವನ್ನೇ ತಿರುಗಿ ನೋಡುವಂತೆ ಯಶಸ್ವಿ ಮಾಡುತ್ತೀರಿ ಇದು ಅತ್ಯಂತ ಸಂತೋಷದ ವಿಷಯ. ಅದಕ್ಕೆ ಪಕ್ಷ ಪಂಗಡ ಎನ್ನದೇ ಕೆಲಸದಲ್ಲಿ ತೊಡಗುವ ನಿಮ್ಮೆಲ್ಲರ ಒಗ್ಗಟ್ಟೇ ಕಾರಣ ಎಂದರು. ಸನ್ಮಾನ ಸ್ವೀಕರಿಸಿ ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಕನ್ನಡದ ತೇರನ್ನು ಎಳೆಯುವಲ್ಲಿ ಶಾಸಕರು ಮತ್ತು ಎಲ್ಲ ಹಿರಿಯರ ಮಾರ್ಗದರ್ಶನವನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದರು.
ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ ಮತ್ತು ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ ಸಾಧಕರನ್ನು ಪರಿಚಯಿಸಿದರು. ಗಣ್ಯ ವ್ಯಾಪಾರಿ ಬಸವರಾಜ ಮೋಟಗಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಗಪೂರ ಮಕಾನದಾರ, ತಾಳಿಕೋಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಹೆಬೂಬ ಚೋರಗಸ್ತಿ, ನಿವೃತ್ತ ಡಿ.ವಾಯ್.ಎಸ್.ಪಿ ಎಸ್.ಎಸ್.ಹುಲ್ಲೂರ, ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ, ಗಣ್ಯ ಬ್ಯಾಪಾರಿ ರಮೆಶ ಓಸ್ವಾಲ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ, ಸುಧೀರ ನಾವದಗಿ, ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ ಮಾಜಿ ಸದಸ್ಯ ಮುತ್ತಣ್ಣ ರಾಯಗೊಂಡ, ಪ್ರಮುಖರಾದ ಸಂಗಣ್ಣ ಬಿರಾದಾರ(ಜಿಟಿಸಿ), ಸೋನಿ ಇಲ್ಲೂರ, ರಾಜುಗೌಡ ಗೌಡರ, ರುದ್ರಗೌಡ ಅಂಗಡಗೇರಿ, ಸಂಗಣ್ಣ ಮೇಲಿನಮನಿ, ಹುಸೇನ ಮುಲ್ಲಾ, ಟಿ.ಭಾಸ್ಕರ, ಹರೀಶ ಬೆವೂರ, ಶ್ರೀಶೈಲ ಪೂಜಾರಿ, ಬಬಲು ಹುಣಚಗಿ ಸೇರಿದಂತೆ ಮತ್ತೀತರರು ಇದ್ದರು. ಪುರಸಭೆ ಮಾಜಿ ಸದಸ್ಯ ಪಿಂಟು ಸಾಲಿಮನಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.