ಇಂಡಿ: ಮೋಸ ಮಾಡಿದವರಿಗೆ ತಕ್ಕ ಪಾಠ ಕಲಿಸುವೆ ಎಂದು ಹ್ಯಾಟ್ರಿಕ್ ಹೀರೊ, ಮಾಜಿ ಶಾಸಕ ರವಿಕಾಂತ್ ಪಾಟೀಲ ಮಂಗಳವಾರ ಹೇಳಿದರು.
ಪಟ್ಟಣದ ಜೆಡಿಎಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಬಿಜೆಪಿ ಟಿಕೆಟ್ ಕೊಡುವ ಭರವಸೆ ನೀಡಿ ಮೋಸ ಮಾಡಿದ್ದಾರೆ. ಹಾಗಾಗಿ ಸಹೋದರ, ಸಹೋದರಿಯರು, ತಂದೆ ತಾಯಂದಿರು, ಅಭಿಮಾನಿಗಳು ಈ ಬಾರಿ ಮೋಸ ಮಾಡಿದ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಈ
ಸದ್ಯ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದು ಜೆಡಿಎಸ್ ಪಕ್ಷವನ್ನು ಬೆಂಬಲಿಸುವೆ ಮತ್ತು ಈ ಪಕ್ಷದಲ್ಲಿ ಮುಂದುವರೆಯುತ್ತೇನೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಾನಾಗೌಡ ಬಿರಾದಾರ , ಯುವರಾಜ ಪಾಟೀಲ ಡಾ. ರಮೇಶ ಹಾಗೂ ಮುಖಂಡರು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.