Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಣಶ್ಯಾಳದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಹುಣಶ್ಯಾಳದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಣಶ್ಯಾಳದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಮನವಿ

ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಲ್ಲಿ ಎಗ್ಗಿಲ್ಲದೆ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆದು ಕೂಲಿ ಕಾರ್ಮಿಕರ ಸುಗಮ ಸಂಸಾರ ನಿರ್ವಹಣೆಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ಗ್ರಾಮಸ್ಥರು ಗ್ರಾಮವ್ಯಾಪ್ತಿಯಲ್ಲಿ ಮಾಡಲಾಗುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೈನುದ್ದೀನ್ ಬಾಗವಾನ ಮಾತನಾಡಿ, ಗ್ರಾಮದ ನಬಿಲಾಲ ಉಸ್ತಾದ, ಬಾಬು ಉಸ್ತಾದ, ಮಕ್ತಮಸಾಬ್ ಪೋಲಾಸಿ, ಹುಸೇನಬಿ ಪೋಲಾಸಿ, ರೋಜಾಬಿ ಪೋಲಾಸಿ, ಮಲ್ಲಪ್ಪ ಬೋರಗಿ, ದಸ್ತಗೀರ್ ಉಸ್ತಾದ, ಮಾಂತಪ್ಪ ತಳವಾರ ಇವರುಗಳು ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಯುವಕರು ಕುಡಿಯುವ ಚಟಕ್ಕೆ ಅಂಟಿಕೊಂಡು ಹಗಲು ರಾತ್ರಿ ಕುಡಿಯುತ್ತಿದ್ದಾರೆ. ಜೊತೆಗೆ ಹಾದಿಯಲ್ಲಿ ಹೋಗುವ ಮಹಿಳೆಯರನ್ನು ಚುಡಾಯಿಸುವುದು, ಅವಾಚ್ಯ ಶಬ್ದಗಳಿಂದ ಹೀಯಾಳಿಸುವ ಮೂಲಕ ತೊಂದರೆ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ಅಬಕಾರಿ ಇಲಾಖೆ ಹಾಗೂ ಕಲಕೇರಿ ಪೊಲೀಸ್ ಠಾಣೆಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಸ್ವತಃ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳೇ ಅಕ್ರಮ ಮಾರಾಟಗಾರರಿಗೆ ದೂರವಾಣಿ ಕರೆ ಮಾಡಿ ನಾಳೆ ವಿಚಾರಣೆಗೆ ಬರುತ್ತೇವೆ ಸರಾಯಿ ಎಲ್ಲಾದರೂ ದೂರ ತೆಗೆದಿಡಿ ಎಂದು ಮಾಹಿತಿ ನೀಡುವ ಮೂಲಕ ಮಾರಾಟಗಾರರೊಂದಿಗೆ ಶಾಮೀಲಾಗಿದ್ದಾರೆ. ಈ ಕುರಿತು ತಾವು ಕೂಡಲೇ ಅಗತ್ಯ ಕ್ರಮ ವಹಿಸಬೇಕು. ಇಲ್ಲದಿದ್ದರೇ ಗ್ರಾಮ ಪಂಚಾಯಿತಿ ಮುಂದೆ ಗ್ರಾಮದ ಮಹಿಳೆಯರು ಹಾಗೂ ಯುವಕರು ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಎಚ್ಚರಿಸಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಅಬಕಾರಿ ಇಲಾಖೆಯೊಂದಿಗೆ ಸೇರಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಶಾಂತಗೌಡ ಕೋಟಿಖಾನಿ, ಶಫೀಕ್ ಸಿಪಾಯಿ, ಮಹ್ಮದ್ ಬಾಗವಾನ, ಅಶ್ಪಾಕ್ ತಾಳಿಕೋಟಿ, ಇಬ್ರಾಹಿಂ ಹವಾಲ್ದಾರ್, ಸದ್ದಾಂ ಬಿಂಜಲಭಾವಿ, ಶಕೀಲ್ ಪೋಲಾಸಿ, ಸಂತೋಷ ಪಾಕಿ, ಸದ್ದಾಂ ಬಡೇಮ್‌ಗೋಳ, ಹನೀಫ್ ಬಡೇಮ್‌ಗೋಳ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.